ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ವಾಹನವು ಆಳವಾದ ಕಣಿವೆಗೆ ಬಿದ್ದ ಪರಿಣಾಮ ನಾಲ್ವರು ಯೋಧರು ಶನಿವಾರ ಮೃತಪಟ್ಟಿದ್ದಾರೆ.
ಇದ ವೇಳೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ.
ಉತ್ತರ ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ವಾಹನ ಕಮರಿಗೆ ಬಿದ್ದು ಇಬ್ಬರು ಸೈನಿಕರ ಸಾವು, ಮೂವರು ಗಂಭೀರವಾಗಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಬಂಡಿಪೋರಾ-ಶ್ರೀನಗರ ರಸ್ತೆಯ ಎಸ್ಕೆ ಪಯೀನ್ ಬಳಿ ವಾಹನ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಬಂಡಿಪೋರಾಕ್ಕೆ ಕರೆದೊಯ್ಯಲಾಯಿತು, ಅಲ್ಲಿ ಇಬ್ಬರು ಬರುವಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ತೀವ್ರವಾಗಿ ಗಾಯಗೊಂಡ ಮೂವರು ಸೈನಿಕರನ್ನು ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ
ಕೇಂದ್ರಾಡಳಿತ ಪ್ರದೇಶದಲ್ಲಿ ಸೇನಾ ವಾಹನವನ್ನು ಒಳಗೊಂಡ ಅಪಘಾತ ಸಂಭವಿಸುತ್ತಿರುವುದು ಇದೇ ಮೊದಲಲ್ಲ.
ಡಿಸೆಂಬರ್ 24, 2024 ರಂದು ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ನಿಯಂತ್ರಣ ತಪ್ಪಿ 350 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ಐವರು ಸೈನಿಕರು ಸಾವನ್ನಪ್ಪಿದ್ದರು ಮತ್ತು ಇತರ ಐದು ಮಂದಿ ಗಾಯಗೊಂಡಿದ್ದರು. ಈ ಘಟನೆಯಲ್ಲಿ ಯಾವುದೇ ಭಯೋತ್ಪಾದಕ ಕೋನವನ್ನು ಸೇನೆ ತಳ್ಳಿಹಾಕಿದೆ.
ನವೆಂಬರ್ 4, 2024ರಂದು ರಾಜೌರಿ ಜಿಲ್ಲೆಯಲ್ಲಿ ವಾಹನವು ರಸ್ತೆಯಿಂದ ಜಾರಿ ಕಮರಿಗೆ ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಗಾಯಗೊಂಡಿದ್ದರು.
ನವೆಂಬರ್ 2, 2024ರಂದು ರಿಯಾಸಿ ಜಿಲ್ಲೆಯಲ್ಲಿ ಕಾರು ಗುಡ್ಡಗಾಡು ರಸ್ತೆಯಿಂದ ಜಾರಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಮಹಿಳೆ ಮತ್ತು ಅವಳ 10 ತಿಂಗಳ ಮಗ ಸೇರಿದಂತೆ ಮೂವರು ಸಾವಿಗೀಡಾಗಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.