Saturday, July 6, 2024
Google search engine
Homeತಾಜಾ ಸುದ್ದಿಲೋಕಸಭೆಯಲ್ಲಿ ಆಪ್ ಗೆದ್ದರೆ ಉಚಿತ ವಿದ್ಯುತ್, ಆರೋಗ್ಯ ಸೇವೆ: ಅರವಿಂದ್ ಕೇಜ್ರಿವಾಲ್ ಘೋಷಣೆ

ಲೋಕಸಭೆಯಲ್ಲಿ ಆಪ್ ಗೆದ್ದರೆ ಉಚಿತ ವಿದ್ಯುತ್, ಆರೋಗ್ಯ ಸೇವೆ: ಅರವಿಂದ್ ಕೇಜ್ರಿವಾಲ್ ಘೋಷಣೆ

2024ರ ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಗೆಲುವು ಸಾಧಿಸಿದರೆ ಉಚಿತ ವಿದ್ಯುತ್ ಮತ್ತು ಉಚಿತ ಆರೋಗ್ಯ ಸೇವೆ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಅರವಿಂದ್ ಕೇಜ್ರಿವಾಲ್ 50 ದಿನಗಳ ಜೈಲುವಾಸದ ನಂತರ ಸುಪ್ರೀಂಕೋರ್ಟ್ ನೀಡಿದ ಮಧ್ಯಂತರ ಜಾಮೀನಿನ ಹಿನ್ನೆಲೆಯಲ್ಲಿ ಬಿಡುಗಡೆ ಆಗಿದ್ದು, ಲೋಕಸಭಾ ಚುನಾವಣೆಯಲ್ಲಿ ಸತತವಾಗಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.

ಬಿಜೆಪಿ ಯಾವಾಗಲೂ ಸುಳ್ಳು ಹೇಳುತ್ತಲೇ ಬಂದಿದೆ. ಬಿಜೆಪಿ ಯಾವತ್ತೂ ತಾನು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ನಾವು ನುಡಿದಂತೆ ನಡೆದಿದ್ದೇವೆ. ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ ಎಂಬುದು ಅಂಕಿ ಅಂಶಗಳೇ ಹೇಳುತ್ತವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments