ರಾಜ್ಯಾದ್ಯಂತ ರೆಸ್ಟೋರೆಂಟ್, ಹೋಟೆಲ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆ ಹಾಗೂ ಮಾರಾಟವನ್ನು ನಿಷೇಧಿಸಿ ಅಸ್ಸಾಂ ಸರ್ಕಾರ ಆದೇಶಿಸಿದೆ.
ಮುಖ್ಯಮಂತ್ರಿ ಹೀಮಂತ್ ಬಿಸ್ವಾ ಶರ್ಮ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಗೋಮಾಂಸ ಸೇವನೆಯನ್ನು ನಿಷೇಧಿಸಿ ತೀರ್ಮಾನ ಕೈಗೊಳ್ಳಲಾಗಿದೆ.
ಅಸ್ಸಾಂನಲ್ಲಿ ಗೋಮಾಂಸ ಪ್ರಮುಖ ಆಹಾರ ಪದ್ಧತಿಯಾಗಿದೆ. ಆದ್ದರಿಂದ ಗೋಮಾಂಸ ಸೇವನೆಯನ್ನು ನಿಷೇಧಿಸಿಲ್ಲ. ಆದರೆ ಸಾರ್ವಜನಿಕ ಸ್ಥಳ ಸೇವಿಸುವಂತಿಲ್ಲ ಎಂದು ಗೋಮಾಂಸ ನಿಷೇಧ ಕಾಯ್ದೆ ಜಾರಿಗೊಳಿಸಲು ಮುಂದಾಗಿದೆ.
ಇದಕ್ಕೂ ಮುನ್ನ ಗೋ ರಕ್ಷಣೆ ಕಾಯ್ದೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದ್ದು, ಈ ಕಾಯ್ದೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುವುದು ಎಂದು ಹೀಮಂತ್ ಬಿಸ್ವಾ ಹೇಳಿದ್ದಾರೆ.