Sunday, September 8, 2024
Google search engine
Homeಅಪರಾಧಬೆಂಗಳೂರಿನ ಲೇಡಿಸ್ ಪಿಜಿ ನುಗ್ಗಿ ಯುವತಿಯ ಬರ್ಬರ ಹತ್ಯೆ!

ಬೆಂಗಳೂರಿನ ಲೇಡಿಸ್ ಪಿಜಿ ನುಗ್ಗಿ ಯುವತಿಯ ಬರ್ಬರ ಹತ್ಯೆ!

ಲೇಡಿಸ್ ಪಿಜಿಯೊಳಗೆ ನುಗ್ಗಿದ ದುಷ್ಕರ್ಮಿಯೊಬ್ಬ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೋರಮಂಗಲದ ಲೇಡಿಸ್ ಪಿಜಿಯಲ್ಲಿ ತಂಗಿದ್ದ ಬಿಹಾರ ಮೂಲದ ಕೃತಿ ಕುಮಾರಿ (24) ಹತ್ಯೆಯಾದ ಯುವತಿ. ಕೊಲೆ ಮಾಡಿದ ಯುವಕ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬುಧವಾರ ರಾತ್ರಿ ಲೇಡಿಸ್ ಪಿಜಿಯ ಮೂರನೇ ಮಹಡಿಯಲ್ಲಿದ್ದ ಯುವತಿಯ ಕೊಠಡಿಗೆ ನುಗ್ಗಿದ ಯುವಕ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದು, ಪಿಜಿಗೆ ಭದ್ರತಾ ಸಿಬ್ಬಂದಿ ನೇಮಕ ಮಾಡದ ಲೋಪವನ್ನು ಬಳಸಿಕೊಂಡು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಜಿಯಲ್ಲಿನ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಲಾಗಿದ್ದು ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments