Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಗಣೇಶ ಹಬ್ಬಕ್ಕೆ ಗ್ರೀನ್ ಸಿಗ್ನಲ್: ಪಿಒಪಿ ಗಣೇಶ ಮೂರ್ತಿಗೆ ನಿರ್ಬಂಧ ವಿಧಿಸಿದ ಬಿಬಿಎಂಪಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 33 ವೀಕ್ಷಣೆಗಳು
ganesh murthy
ganesh murthy

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಿಬಿಎಂಪಿ ಬೆಂಗಳೂರಿನಲ್ಲಿ ಗಣೇಶ ಹಬ್ಬಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಬೆಂಗಳೂರು ಜಿಲ್ಲಾಧಿಕಾರಿ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಇಲಾಖೆ, ವಾಯು ಮಾಲಿನ್ಯ ಮಂಡಳಿ ಹಿರಿಯ ಅಧಿಕಾರಿಗಳು ಚರ್ಚಿಸಿ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ ಹೇರಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ​​ ತುಷಾರ್ ಗಿರಿನಾಥ್, ‘ಗಣೇಶನ ಪ್ರತಿಷ್ಠಾಪನೆ ಮಾಡುವವರಿಗೆ ಯಾವುದೇ ನಿರ್ಬಂಧವಿಲ್ಲ.  24 ಗಂಟೆಯೊಳಗೆ ಅನುಮತಿ ಕೊಡಲು ಆಯಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದರು.

ಈಗಾಗಲೇ ಪಿಒಪಿ ಗಣೇಶಗಳನ್ನ ಸೀಜ್ ಮಾಡಲಾಗಿದೆ. ಕಳೆದ ಬಾರಿ 5 ಅಡಿ ಗಣೇಶ ಮೂರ್ತಿಗಷ್ಟೇ ಅನುಮತಿ ಕೊಡಲಾಗಿತ್ತು. ಈ ಬಾರಿ ಬೆಂಗಳೂರಲ್ಲಿ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ. ಗಣೇಶನ ವಿಸರ್ಜನೆ ವೇಳೆ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಗಣೇಶ ವಿಸರ್ಜನೆ ಮಾಡುವ 42 ಕೆರೆ, ಕಲ್ಯಾಣಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗುವುದು. ಕಲ್ಯಾಣಿ ಬಳಿ‌ ಆ್ಯಂಬುಲೆನ್ಸ್, ಅಗ್ನಿಶಾಮಕ ವಾಹನ ನಿಲುಗಡೆಗೆ ಸೂಚಿಸಿದ್ದು, ಬೆಂಗಳೂರು ನಗರದ ಮನೆ ಮನೆ ಗಣಪನ ವಿಸರ್ಜನೆಗೆ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಬೆಸ್ಕಾಂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು. ಈ ಕುರಿತು ನೋಡಲ್ ಅಧಿಕಾರಿಗಳ ವಿವರವಾದ ಮಾಹಿತಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು. ಅದರನುಸಾರ ಗಣೇಶ ಮೂರ್ತಿಗಳನ್ನಿಡುವವರು ಏಕಗವಾಕ್ಷಿ ಸ್ಥಳಕ್ಕೆ ಭೇಟಿ ನೀಡಿ ಒಂದೇ ಸ್ಥಳದಲ್ಲಿ ಅನುಮತಿ ಪಡೆಯಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment