8
ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಮ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಯುವತಿ ಸಜೀವದಹನಗೊಂಡ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಭವಿಸಿದೆ
ಬೆಂಗಳೂರಿನ ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿ ಮಂಗಳವಾರ ಈ ದುರ್ಘಟನೆ ಸಂಭವಿಸಿದ್ದು, ಶೋ ರೂಮ್ ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದ 20 ವರ್ಷದ ಯುವತಿ ಪ್ರಿಯಾ ಮೃತಪಟ್ಟಿದ್ದಾರೆ.
ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಪರಿಣಾಮ ಶೋರೂಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.