ಮೊಬೈಲ್ ರಿಪೇರಿ ಮಾಡಿಸಿಕೊಂಡು ಎಂದು ಕೇಳಿದ್ದಕ್ಕೆ ಹೆತ್ತ ಮಗನನ್ನೇ ತಂದೆ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಂದೆ ರವಿ ಕುಮಾರ್ ೧೪ ವರ್ಷದ ಮಗ ತೇಜಸ್ ನನ್ನು ಕೊಂದಿದ್ದಾರೆ.
ಸರಿಯಾಗಿ ಕೆಲಸ ಮಾಡುತ್ತಿಲ್ಲ ಮೊಬೈಲ್ ರಿಪೇರಿ ಮಾಡಿಸಿಕೊಂಡು ಎಂದು ತೇಜಸ್ ತಂದೆಯ ಬಳಿ ಕೇಳಿದ್ದಾನೆ. ಈ ವಿಷಯದ ಮೇಲೆ ತಂದೆ ಮತ್ತು ಮಗನ ನಡುವೆ ಜಗಳ ನಡೆದಿದ್ದು ಮಗನನ್ನೇ ತಂದೆ ಹೊಡೆದು ಕೊಂದಿದ್ದಾನೆ.
ಕುಮಾರಸ್ವಾಮಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ರವಿಕುಮಾರ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.