Home ತಾಜಾ ಸುದ್ದಿ ಬೆಸ್ಕಾಂಗೆ ಒಲಿದ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ!

ಬೆಸ್ಕಾಂಗೆ ಒಲಿದ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ!

by Editor
0 comments
kj george

ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್‌ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿದೆ.

ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಇವಿ ಚಾರ್ಚಿಂಗ್‌ ಸೇವೆ ಒದಗಿಸುವ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಇವಿ ಉದ್ಯಮದ ಪ್ರಮುಖರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್  ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ನಮ್ಮದಾಗಿದ್ದು, ಒಟ್ಟು 5,765 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. 5,765 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿರುವ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ, 3,728 ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಮಹಾರಾಷ್ಟ್ರ 2ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ- 1,989 ಮತ್ತು ದಿಲ್ಲಿ-  1,941 ಚಾರ್ಜಿಂಗ್ ಸ್ಟೇಷನ್ ಗಳೊಂದಿಗೆ ನಂತರದ ಸ್ಥಾನದಲ್ಲಿವೆ.

ದೇಶದ ಪ್ರಮುಖ ನಗರಗಳಲ್ಲಿ ಇವಿ ಬಳಕೆದಾರರ ಸಂಖ್ಯೆ ಹೆಚ್ಚಿದ್ದರೂ, ರಾಜ್ಯ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಇವಿ ಬಳಕೆದಾರರಿದ್ದಾರೆ. ಅದಕ್ಕೆ ಪೂರಕವಾಗಿ ಸರ್ಕಾರ ಅಗತ್ಯ ಮೂಲ ಸೌಕರ್ಯ ಒದಗಿಸಿದೆ. ಇವಿ ಚಾರ್ಜಿಂಗ್ ಸ್ಟೇಷನ್ ವಿಚಾರದಲ್ಲಿ ಬೆಂಗಳೂರು ನಗರವು ಮುಂಚೂಣಿಯಲ್ಲಿದ್ದು, ನಗರ ಜಿಲ್ಲೆಯಲ್ಲಿ  4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಇದು ರಾಜ್ಯದ ಒಟ್ಟಾರೆ ಇವಿ ಚಾರ್ಜಿಂಗ್‌ ಸ್ಟೇಷನ್‌ಗಳ ಪೈಕಿ ಶೇ. 85ರಷ್ಟು.

banner

ಇವಿ ಚಾರ್ಚಿಂಗ್‌ ಸ್ಟೇಷನ್‌ಗಳ ಜತೆಗೆ ಇವಿ ಬಳಕೆದಾರರಿಗೆ  ಸುಗಮ ಚಾರ್ಜಿಂಗ್‌  ಸೌಲಭ್ಯ ಒದಗಿಸುವಲ್ಲಿ  ‘ಇವಿ ಮಿತ್ರ’ ಆ್ಯಪ್‌  ಪಾತ್ರವೂ ದೊಡ್ಡದು. ಆ್ಯಂಡ್ರಾಯ್ಡ್ ಮತ್ತು ಐಓಎಸ್‌ ಎರಡು ಮೊಬೈಲ್‌ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆ್ಯಪ್‌- ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಚಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಚಿಂಗ್ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ. ಹಣ ಪಾವತಿಗೆ ಹಲವು ಆಯ್ಕೆಗಳನ್ನು ಒಳಗೊಂಡಿದೆ.  ರಿಟೇಲ್‌ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್, ಪ್ರೊಫೈಲ್ ಲಭ್ಯವಿದೆ.

ಇವಿ ಸ್ಟೇಷನ್‌ಗಳ ವಿವರ:

ರಾಜ್ಯದಲ್ಲಿರುವ ಒಟ್ಟು ಇವಿ ಚಾರ್ಚಿಂಗ್ ಸ್ಟೇಷನ್‌ಗಳು: 5765

ಬೆಸ್ಕಾಂ ಸ್ಥಾಪಿಸಿರುವ ಇವಿ ಚಾರ್ಚಿಂಗ್ ಸ್ಟೇಷನ್‌ಗಳು: 195

ಇತರ ಎಸ್ಕಾಂಗಳು ಸ್ಥಾಪಿಸಿರುವ ಇವಿ ಚಾರ್ಚಿಂಗ್ ಸ್ಟೇಷನ್‌ಗಳು: 70

ಸರ್ಕಾರದ ಇತರ ಇಲಾಖೆಗಳು ಸ್ಥಾಪಿಸುರವ ಚಾರ್ಚಿಂಗ್ ಸ್ಟೇಷನ್‌ಗಳು: 21

ಖಾಸಗಿ ಚಾರ್ಚಿಂಗ್ ಸ್ಟೇಷನ್‌ಗಳು: 5479

“ಸುಸ್ಥಿರ ಮತ್ತು ಶುದ್ಧ ಇಂಧನ ಬಳಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ಬದ್ಧತೆಗೆ ಸಂದ ಪ್ರಶಸ್ತಿ ಇದು. ಖಾಸಗಿ ಪ್ರಾಬಲ್ಯಕ್ಕೆ ಅವಕಾಶ ಕೊಡೆದೇ, ಇವಿ ಬಳಕೆದಾರರಿಗೆ ಕಡಿಮೆ ವೆಚ್ಚದಲ್ಲಿ ಚಾರ್ಚಿಂಗ್‌ ಮೂಲ ಸೌಕರ್ಯ ಒದಗಿಸುವಲ್ಲಿ ನಮ್ಮ ರಾಜ್ಯ ಮೊದಲ ಸ್ಥಾನದಲ್ಲಿದೆ. ಇದು ನಿಜಕ್ಕೂ ಹೆಮ್ಮೆಯ ಸಂಗತಿ. ಎಲೆಕ್ಟ್ರಿಕ್ ವಾಹನ ಪರಿಸರ ವ್ಯವಸ್ಥೆಗೆ ಒತ್ತು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ 2024ರ ರಾಜ್ಯ ಬಜೆಟ್‌ನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರಾಜ್ಯಾದ್ಯಂತ ಸುಮಾರು 2,500 ಹೊಸ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್‌ ತಿಳಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ 2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಇಲ್ಲ: ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ತೀರ್ಮಾನ 2nd Test: ಆಸ್ಟ್ರೇಲಿಯಾಗೆ ಹೆಡ್ ಶತಕದ ಬಲ: ಭಾರತಕ್ಕೆ 157 ರನ್ ಹಿನ್ನಡೆ