Wednesday, July 3, 2024
Google search engine
Homeಅಪರಾಧಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ: ಶೀಘ್ರದಲ್ಲೇ ಎಸ್ ಐಟಿ ಬಂಧನ?

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ: ಶೀಘ್ರದಲ್ಲೇ ಎಸ್ ಐಟಿ ಬಂಧನ?

ಕೆಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಐಪಿಸಿ ಸೆಕ್ಷನ್‌ 120 ಬಿ (ಕ್ರಿಮಿನಲ್‌ ಪಿತೂರಿ) ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದಾಗಿನಿಂದ ಭವಾನಿ ರೇವಣ್ಣ ನಾಪತ್ತೆಯಾಗಿದ್ದಾರೆ. ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. ಜೈಲಿನಿಂದ ಬಿಡುಗಡೆ ಆಗಿರುವ ಪತಿ ರೇವಣ್ಣ ಅವರನ್ನು ಭೇಟಿ ಆಗಿಲ್ಲ. ಅಜ್ಞಾತವಾಸದಲ್ಲಿರುವ ಭವಾನಿ ರೇವಣ್ಣಗೆ ವಿಶೇಷ ತನಿಖಾ ತಂಡ (SIT) ನೋಟಿಸ್ ನೀಡಿದ್ದು, ನಾಳೆ ತನಿಖೆ ಎದುರಿಸುವಂತೆ ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments