Home ತಾಜಾ ಸುದ್ದಿ ಬಿಜೆಪಿ ಸಂಸದ ಸುಧಾಕರ್ ಗೆ ಸಂಕಷ್ಟ: ಕೋವಿಡ್ ಅಕ್ರಮ ತನಿಖೆ ಎಸ್ ಐಟಿ ರಚನೆಗೆ ಸಂಪುಟ ತೀರ್ಮಾನ

ಬಿಜೆಪಿ ಸಂಸದ ಸುಧಾಕರ್ ಗೆ ಸಂಕಷ್ಟ: ಕೋವಿಡ್ ಅಕ್ರಮ ತನಿಖೆ ಎಸ್ ಐಟಿ ರಚನೆಗೆ ಸಂಪುಟ ತೀರ್ಮಾನ

by Editor
0 comments
dr.k sudhakar

ಕೋವಿಡ್ ಸಮಯದಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸಲು ಎಸ್ ಐಟಿ ರಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇದರಿಂದ ಬಿಜೆಪಿ ಸಂಸದ ಡಾ.ಕೆ. ಸುಧಾಕರ್ ಗೆ ಸಂಕಷ್ಟ ಶುರುವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ವೈರಸ್ ಅಬ್ಬರದ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮಗಳ ಕುರಿತು ತನಿಖೆಯನ್ನು ಎಸ್ ಐಟಿ ಗೆ ವಹಿಸಲು ತೀರ್ಮಾನಿಸಲಾಯಿತು. ತನಿಖೆ ಆರಂಭವಾದರೆ, ಸುಧಾಕರ್ ಎಸ್ ಐಟಿ ಪೊಲೀಸರ ಮುಂದೆ ಹಾಜರಾಗಬೇಕಾಗುತ್ತದೆ.

ಕೋವಿಡ್ ಕಾಲದಲ್ಲಿ ಪಿಪಿಟಿ ಕಿಟ್, ಎಸಿ, ಮಾಸ್ಕ್ ಸೇರಿದಂತೆ ಹಲವು ಅಕ್ರಮಗಳು ನಡೆದಿದ್ದು, 7 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ಕೂಡ ವರದಿ ನೀಡಿದ್ದು, ವರದಿ ಆಧಾರದ ಮೇಲೆ ತನಿಖೆಗೆ ಆದೇಶಿಲಾಗುವುದು ಎಂದು ಸಂಪುಟ ಸಭೆಯ ವಿವರವನ್ನು ಸಚಿವ ಎಚ್.ಕೆ. ಪಾಟೀಲ್ ನೀಡಿದರು.

ಬಿಜೆಪಿ ಆಡಳಿತದಲ್ಲಿ ನಡೆದ ಕೋವಿಡ್ ಭ್ರಷ್ಟಾಚಾರದ ಕುರಿತು ಪೊಲೀಸರು ತನಿಖೆ ನಡೆಸಲಿದ್ದು, ಅಗತ್ಯ ಬಿದ್ದರೆ ಎಸ್ ಐಟಿಗೆ ವಹಿಸಲಾಗುವುದು. ಭ್ರಷ್ಟಾಚಾರದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆಯಿಂದ ಹೊರಗೆ ಬರಲಿದೆ ಎಂದು ಅವರು ಹೇಳಿದರು.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
Belagavi session ವಿಜಯೇಂದ್ರ ರಾಜೀನಾಮೆಗೆ ಮುಹೂರ್ತ ಫಿಕ್ಸ್: ಸಚಿವ ಭೈರತಿ ಸುರೇಶ್ ಬಾಂಬ್ ಬೀಡಾಡಿ ಹಸುಗಳ ಕುತ್ತಿಗೆಗೆ ಬೆಳಕಿನ ಪಟ್ಟಿ: ಯುಪಿಯಲ್ಲಿ ವಿನೂತನ ಪ್ರಯೋಗ! Bigg Boss 11 ಟಿಆರ್ ಪಿಯಲ್ಲಿ ಬಿಗ್ ಬಾಸ್ ಹೊಸ ದಾಖಲೆ: ಸುದೀಪ್ ಕೊಟ್ಟ ವಿವರ ಏನು? ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ