Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ನನ್ನ ಮುಗಿಸಿದರೆ ಕಾಂಗ್ರೆಸ್ ಮುಗಿಸಬಹುದು ಎಂಬ ಭ್ರಮೆಯಲ್ಲಿದೆ ಬಿಜೆಪಿ: ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 28 ವೀಕ್ಷಣೆಗಳು
siddaramiah
siddaramiah

ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸಿದರೆ ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯಪಾಲರ ತೀರ್ಮಾನದ ವಿರುದ್ಧ ಹೈಕೋರ್ಟ್ ಗೆ ದೂರು ಸಲ್ಲಿಸಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಆದೇಶ ಪ್ರಶ್ನೆ ಮಾಡಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದೇವೆ. ಪ್ರಾಸಿಕ್ಯೂಷನ್​ಗೆ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದೇವೆ. ಬೆಂಗಳೂರಿಗೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಬರುತ್ತಿದ್ದಾರೆ. ನ್ಯಾಯಾಲಯದ ಮೇಲೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದರು.

40 ವರ್ಷದ ರಾಜಕೀಯ ಜೀವನದಲ್ಲಿ ಯಾವ ಕಪ್ಪುಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ನಾನು ಯಾವತ್ತೂ ತಪ್ಪು ಮಾಡಿಲ್ಲ, ಮಾಡೋದೂ ಇಲ್ಲ. ಮಸಿ ಬಳಿಯಬೇಕು ಅಂತಾ ಈ ರೀತಿ ಆರೋಪ ಮಾಡ್ತಿದ್ದಾರೆ. ರಾಜಕೀಯ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇದೇ ವೇಳೆ ಮಾನಸಿಕವಾಗಿ ನೀವು ಡಲ್​ ಆಗಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ಡಲ್​ ಆಗಿಲ್ಲ, ಇನ್ನೂ ಸ್ಟ್ರಾಂಗ್ ಆಗಿದ್ದೇನೆ. ಬಿಜೆಪಿ-ಜೆಡಿಎಸ್ ತಂತ್ರಗಾರಿಕೆಗೆ ಬಗ್ಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆಗಸ್ಟ್ 23ರಂದು‌ ದೆಹಲಿ ಪ್ರವಾಸ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದರು. ಶುಕ್ರವಾರ ದೆಹಲಿಗೆ ಹೊಗ್ತಿದ್ದೀನಿ. ಖರ್ಗೆಯವರು ಬೆಂಗಳೂರಿಗೆ ಬಂದಿದ್ದರು, ಮಾತನಾಡಿದ್ದೀನಿ ಎಂದರು. ನಾನು ಬಡವರ ಪರ ಇರೋದಕ್ಕೆ ಬಿಜೆಪಿ ಅವರಿಗೆ ಭಯ. ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೀನಿ ಅದಕ್ಕೆ ಅವರಿಗೆ ಭಯ. ಸಿದ್ದರಾಮಯ್ಯನ ರಾಜಕೀಯವಾಗಿ ಮುಗಿಸಿದ್ರೆ, ಕಾಂಗ್ರೆಸ್ಸನ್ನೆ ಮುಗಿಸಿದ್ವಿ ಅನ್ನೋ ಭ್ರಮೆಯಲ್ಲಿದ್ದಾರೆ. ಅವರ ಭ್ರಮೆ ಈಡೇರಲ್ಲ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment