Wednesday, July 3, 2024
Google search engine
Homeಅಪರಾಧಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಹೊಸ ಪ್ರಕರಣದಲ್ಲಿ ಬಿಜೆಪಿಯ ಪ್ರೀತಂ ಗೌಡ ಕೂಡ ಆರೋಪಿ!

ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಹೊಸ ಪ್ರಕರಣದಲ್ಲಿ ಬಿಜೆಪಿಯ ಪ್ರೀತಂ ಗೌಡ ಕೂಡ ಆರೋಪಿ!

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಇದರಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಸೇರಿದಂತೆ ನಾಲ್ವರ ಹೆಸರನ್ನು ಕೂಡ ಉಲ್ಲೇಖಿಸಲಾಗಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದೆ. ಇದರಲ್ಲಿ ಪ್ರಜ್ವಲ್ ರೇವಣ್ಣ ಅಲ್ಲದೇ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ, ಶರತ್ ಮತ್ತು ಕಿರಣ್ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಹಾಸನ ಜಿಲ್ಲೆಯಾದ್ಯಂತ ಹಂಚಿಕೆ ಹಿಂದೆ ಪ್ರೀತಂ ಗೌಡ ಕೈವಾಡವಿದೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ.

ಇದೇ ವೇಳೆ ಪ್ರಜ್ವಲ್ ರೇವಣ್ಣ ಅವರನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಸ್ಥಳೀಯ ನ್ಯಾಯಾಲಯ ಆದೇಶಿಸಿದೆ. ಪ್ರಸ್ತುತ ನ್ಯಾಯಾಂಗ ಬಂಧನದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆಯುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments