Friday, September 27, 2024
Google search engine
Homeತಾಜಾ ಸುದ್ದಿಬೈಕ್ ಗೆ ಹಿಂಬದಿಯಿಂದ ಗುದ್ದಿದ ಬಿಎಂಟಿಸಿ ಬಸ್: ಸವಾರ ಬಲಿ

ಬೈಕ್ ಗೆ ಹಿಂಬದಿಯಿಂದ ಗುದ್ದಿದ ಬಿಎಂಟಿಸಿ ಬಸ್: ಸವಾರ ಬಲಿ

ಬೈಕ್ ಗೆ ಬಿಎಂಟಿಸಿ ಬಸ್ ಹಿಂಬದಿಯಿಂದ ಗುದ್ದಿದ್ದರಿಂದ ಸವಾರ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಹಳೇ ಗುಡ್ಡದಹಳ್ಳಿಯಲ್ಲಿ ಶುಕ್ರವಾರ ಸಂಭವಿಸಿದೆ. ಇದರೊಂದಿಗೆ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ ಆಗಿದೆ.

ಮೈಸೂರು ರಸ್ತೆ ಹಳೇ ಗುಡ್ಡದಹಳ್ಳಿ ಬಳಿ ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿದ್ದು, ಬಿಎಂಟಿಸಿ ಬಸ್‌ ಹಿಂಬದಿಯಿಂದ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನ ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಒಂದು ವಾರದ ಹಿಂದೆಯಷ್ಟೇ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾದ ಘಟನೆ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ನಡೆದಿತ್ತು.

ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ (BMTC) ಬಸ್ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದರು. ಅಪಘಾತ (Bus Accident) ತಡೆಯಲು ಕೆಲ ಬಸ್‌ಗಳಲ್ಲಿ ಅಡಾಸ್ (ADAS) ಸಿಸ್ಟಮ್‌, ಅಂದ್ರೆ ಅಡ್ವಾನ್ಸ್ ಡ್ರೈವರ್‌ ಅಸಿಸ್ಟೆನ್ಸ್ ಸಿಸ್ಟಮ್ ಅಳವಡಿಕೆ ಮಾಡಿತ್ತು. ಆದರೂ ಈ ದುರ್ಘಟನೆ ಸಂಭವಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments