Friday, November 15, 2024
Google search engine
Homeತಾಜಾ ಸುದ್ದಿBREAKING ಉತ್ತರಪ್ರದೇಶ ಆಸ್ಪತ್ರೆಯಲ್ಲಿ ಅಗ್ನಿ ದುರಂತಕ್ಕೆ 10 ನವಜಾತ ಶಿಶುಗಳ ದುರ್ಮರಣ

BREAKING ಉತ್ತರಪ್ರದೇಶ ಆಸ್ಪತ್ರೆಯಲ್ಲಿ ಅಗ್ನಿ ದುರಂತಕ್ಕೆ 10 ನವಜಾತ ಶಿಶುಗಳ ದುರ್ಮರಣ

ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10ಕ್ಕೂ ಹೆಚ್ಷು ಮಕ್ಕಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಜಾನ್ಸಿಯ ಆಸ್ಪತ್ರೆಯಲ್ಲಿ ಸಂಭವಿಸಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಮಹಾರಣಿ ಲಕ್ಷ್ಮೀಬಾಯಿ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಮೊದಲ ಬಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಮೊದಲ ಬಾರಿ ಕಾಣಿಸಿಕೊಂಡಿತು ಪ್ರತ್ಯೇಕದರ್ಶಿಗಳು ತಿಳಿಸಿದ್ದು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಸೇರಿದಂತೆ ಎಲ್ಲರೂ ಮಕ್ಕಳ ನಿಗಾ ಘಟಕದ ಬಾಗಿಲು ಹಾಗೂ ಕಿಟಕಿ ಮುರಿದು ಮಕ್ಕಳ ರಕ್ಷಣೆಗೆ ಧಾವಿಸಿದರು.

ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಹಸುಗೂಸುಗಳ ರಕ್ಷಣೆಗೆ ಎಲ್ಲರೂ ಮುಂದಾಗಿದ್ದು, ಸುಮಾರು 35 ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಮಾಹಿತಿ ಪಡೆದಿದ್ದು, ಶೋಕ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments