Friday, October 18, 2024
Google search engine
Homeತಾಜಾ ಸುದ್ದಿBREAKING ತಮಿಳುನಾಡಿಗೆ ನಿತ್ಯ 8000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

BREAKING ತಮಿಳುನಾಡಿಗೆ ನಿತ್ಯ 8000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ತಮಿಳುನಾಡಿಗೆ ಪ್ರತಿನಿತ್ಯ 11 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡದಿರಲು ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ನಡೆದ ಸರ್ವಪಕ್ಷ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಮಳೆಯ ಕೊರತೆ ಇರುವುದರಿಂದ ಸದ್ಯಕ್ಕೆ ಕಾವೇರಿ ಪ್ರಾಧಿಕಾರ ಸೂಚಿಸಿದಂತೆ ನಿತ್ಯ 1 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ ಎಂದರು.

ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಸೂಚಿಸಿದಂತೆ ಪ್ರತಿನಿತ್ಯ 11 ಸಾವಿರ ಕ್ಯೂಸೆಕ್ಸ್ ಬದಲು ನಾಳೆಯಿಂದ ಜುಲೈ ಅಂತ್ಯದವರೆಗೆ 8000 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

ಜುಲೈ ಅಂತ್ಯದವರೆಗೆ ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಜುಲೈ 12ರ ಸಭೆಯಲ್ಲಿಯೇ ಸರ್ಕಾರ ಕಾವೇರಿ ನೀರು ಬಿಡದಿರಲು ನಿರ್ಧರಿಸಿತ್ತು. ಇದೀಗ ಸರ್ವಪಕ್ಷ ಸಭೆಯಲ್ಲೂ ಎಲ್ಲರ ಸಹಮತದೊಂದಿಗೆ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಮೈಲೇಮ್ನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments