ಮನು ಭಾಕರ್ ಮತ್ತು ಸರ್ಬಜೀತ್ ಸಿಂಗ್ ಜೋಡಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ಬರೆದಿದ್ದಾರೆ.
10ಮೀ. ಏರ್ ಪಿಸ್ತೂಲ್ ವಿಭಾಗದ ವೈಯಕ್ತಿಕ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಮನು ಭಾಕರ್ ಮಂಗಳವಾರ ಮಿಶ್ರ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಎರಡು ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.
ಸ್ವಾತಂತ್ರ್ಯ ನಂತರ ಒಂದೇ ಆವೃತ್ತಿಯ ಒಲಿಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಮೊದಲ ಮಹಿಳೆ ಎಂಬ ಗೌರವಕ್ಕೂ ಮನು ಭಾಕರ್ ಪಾತ್ರರಾಗಿದ್ದಾರೆ. ಈಗಾಗಲೇ ಒಲಿಂಪಿಕ್ಸ್ ನ ಶೂಟಿಂಗ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಬರೆದಿದ್ದ ಮನು ಹಲವು ದಾಖಲೆಗಳನ್ನು ಮುಡಿಗೇರಿಸಿಕೊಂಡರು.
ಮನು ಭಾಕರ್ ಮತ್ತು ಸರ್ಬಜೀತ್ ಸಿಂಗ್ ಜೋಡಿ 10 ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕಕ್ಕಾಗಿ ನಡೆದ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ 16-10 ಅಂಕಗಳಿಂದ ಮಣಿಸಿದರು. ಅದ್ಭುತ ಫಾರ್ಮ್ ನಲ್ಲಿರುವ ಮನು ಭಾಕರ್ ಒಂದು ಹಂತದಲ್ಲಿ 124 ವರ್ಷಗಳ ಹಿಂದಿನ ಒಲಿಂಪಿಕ್ಸ್ ದಾಖಲೆ ಮುರಿಯವ ಅವಕಾಶ ಹೊಂದಿದ್ದು ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡರು.