Friday, May 17, 2024
Google search engine
Homeಕ್ರೀಡೆಹೈದರಾಬಾದ್ ಅಬ್ಬರಕ್ಕೆ ಬ್ರೇಕ್ ಹಾಕಿದ ಚೆನ್ನೈಗೆ 78 ರನ್ ಭರ್ಜರಿ ಗೆಲುವು

ಹೈದರಾಬಾದ್ ಅಬ್ಬರಕ್ಕೆ ಬ್ರೇಕ್ ಹಾಕಿದ ಚೆನ್ನೈಗೆ 78 ರನ್ ಭರ್ಜರಿ ಗೆಲುವು

ಶತಕ ವಂಚಿತ ನಾಯಕ ಋತುರಾಜ್ ಗಾಯಕ್ವಾಡ್ ಮತ್ತು ತುಷಾರ್ ದೇಶಪಾಂಡೆ ಮಾರಕ ದಾಳಿ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ 78 ರನ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಚೆನ್ನೈನ ಚೆಪಾಕ್ ಮೈದಾನದಲ್ಲಿ ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 212 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 18.5 ಓವರ್ ಗಳಲ್ಲಿ 134 ರನ್ ಗೆ ಪತನಗೊಂಡಿತು.

ಈ ಗೆಲುವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ 9 ಪಂದ್ಯಗಳಿಂದ 5 ಜಯ ಹಾಗೂ 4 ಸೋಲಿನೊಂದಿಗೆ 10 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದರೆ, ಹೈದರಾಬಾದ್ ತಂಡ ಅಷ್ಟೇ ಅಂಕ ಸಂಪಾದಿಸಿದರೂ ರನ್ ಸರಾಸರಿಯಲ್ಲಿ ಹಿಂದೆ ಬಿದ್ದು 4ನೇ ಸ್ಥಾನಕ್ಕೆ ಕುಸಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments