Monday, July 22, 2024
Google search engine
Homeಕಾನೂನುಸಿಎಂ, ಡಿಸಿಎಂ ಬಿಗ್ ರಿಲೀಫ್: ಬಿಜೆಪಿ ವಿರುದ್ಧ ಭ್ರಷ್ಟಾಚಾರ ಜಾಹಿರಾತು ಪ್ರಕರಣದಲ್ಲಿ ಜಾಮೀನು!

ಸಿಎಂ, ಡಿಸಿಎಂ ಬಿಗ್ ರಿಲೀಫ್: ಬಿಜೆಪಿ ವಿರುದ್ಧ ಭ್ರಷ್ಟಾಚಾರ ಜಾಹಿರಾತು ಪ್ರಕರಣದಲ್ಲಿ ಜಾಮೀನು!

ಬಿಜೆಪಿ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಹೊರಿಸಿ ಜಾಹಿರಾತು ಪ್ರಕಟಿಸಿದ್ದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಲಭಿಸಿದೆ.

ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಿತ್ತು. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು.

ಬಿಜೆಪಿ ಕೇಸಿನ ಹಿನ್ನೆಲೆ ಇಂದು ಸಿಎಂ ಮತ್ತು ಡಿಸಿಎಂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವಿಚಾರಣೆ ವೇಳೆ ಸಿಎಂ ಮತ್ತು ಡಿಸಿಎಂ ಸಾಮಾನ್ಯರಂತೆ ಕೋರ್ಟ್ ಹಾಲಲ್ಲಿ ಕಾಯುತ್ತಿದ್ದರು.

ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರದ ಮೇಲೆ ಮಾಡಿದ್ದ ಭ್ರಷ್ಟಾಚಾರ ಆರೋಪವನ್ನು ಆಗ ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ದೂರು ದಾಖಲಿಸಿದ್ದರು.

ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments