Monday, September 16, 2024
Google search engine
Homeಜಿಲ್ಲಾ ಸುದ್ದಿಬಿಜೆಪಿ- ಜೆಡಿಎಸ್ ಸುಳ್ಳು ಆರೋಪಗಳ ವಿರುದ್ಧ ಕಾನೂನು ಹೋರಾಟ: ಸಿಎಂ ಸಿದ್ದರಾಮಯ್ಯ ಘೋಷಣೆ

ಬಿಜೆಪಿ- ಜೆಡಿಎಸ್ ಸುಳ್ಳು ಆರೋಪಗಳ ವಿರುದ್ಧ ಕಾನೂನು ಹೋರಾಟ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮೈಸೂರಿನಲ್ಲಿ ಶನಿವಾರ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿ ಸುಳ್ಳು ಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿ ಉತ್ತರ ನೀಡಿದೆ.ನನ್ನ ಹೆಸರಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ  ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳು ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ , ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ.  ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments