Thursday, September 19, 2024
Google search engine
Homeತಾಜಾ ಸುದ್ದಿವರ್ಷದಲ್ಲಿ ಅಪಘಾತಕ್ಕೆ 34,916 ಅಪಘಾತ: ಅಧಿಕಾರಿಗಳ ಬೇಜಾವಾಬ್ದಾರಿಗೆ ಸಿಎಂ ಸಿದ್ದರಾಮಯ್ಯ ಗರಂ

ವರ್ಷದಲ್ಲಿ ಅಪಘಾತಕ್ಕೆ 34,916 ಅಪಘಾತ: ಅಧಿಕಾರಿಗಳ ಬೇಜಾವಾಬ್ದಾರಿಗೆ ಸಿಎಂ ಸಿದ್ದರಾಮಯ್ಯ ಗರಂ

ರಾಜ್ಯದಲ್ಲಿ ಅಪಘಾತ ಪ್ರಮಾಣ ಕಡಿಮೆ ಮಾಡಿ ಜನರ ಪ್ರಾಣ ಹಾನಿ ತಡೆಯಲು ಕ್ರಮ ಕೈಗೊಳ್ಳುತ್ತಿಲ್ಲ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಸವಾರರು ಮೃತಪಟ್ಟಿರುವ ವರದಿ ನೋಡಿ ಆಘಾತ ವ್ಯಕ್ತಪಡಿಸಿದರು.

ಅಪಘಾತ ವಲಯ ಮತ್ತು ಬ್ಲಾಕ್ ಸ್ಪಾಟ್ ಗುರುತಿಸಿ ಕೈಕಟ್ಟಿ ಕುಳಿತರೆ ನಿಮ್ಮ ಜವಾಬ್ದಾರಿ ಮುಗೀತಾ? ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗಗ್ರತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ.  ಹಾಟ್‌ಸ್ಟಾಟ್‌ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್‌ ವ್ಯವಸ್ಥೆ, ಟ್ರಾಮಾ ಸೆಂಟರ್‌ ನೆಟ್‌ವರ್ಕ್‌ ಮಾಡಬೇಕು ಎಂದು ಅವರು ಸಲಹೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments