Thursday, November 21, 2024
Google search engine
Homeಜಿಲ್ಲಾ ಸುದ್ದಿಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ

‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಸರಮಾಧ್ಯಮದ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ದುಡ್ಡು ಕೊಟ್ಟು ಬಸ್ಸಲ್ಲಿ ಹೋಗ್ತಿವಿಅಂತ ಮೇಲ್ ಮಾಡಿದ್ದಾರೆ ಅಂತ ಹೇಳಿದ್ದಾರೆ. ಆದರೆ ಯೋಜನೆ ನಿಲ್ಲಿಸುವ ಅಥವಾ ಪರಿಷ್ಕರಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ   ಸ್ಪಷ್ಟಪಡಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ನವೆಂಬರ್ 4ರ ಅವರ ಪ್ರತಿಭಟನೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ‌ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.

ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಶುಭಾಶಯಗಳನ್ನು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments