Home ತಾಜಾ ಸುದ್ದಿ ‘ಮೇಷ್ಟ್ರು’ ಆಗಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ!

‘ಮೇಷ್ಟ್ರು’ ಆಗಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ!

ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸುಮಾರು ಒಂದು ಗಂಟೆ ಕಾಲ ಮೇಷ್ಟ್ರು ಆಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನದ ಬಗ್ಗೆ ಪಾಠ ಮಾಡಿ ಗಮನ ಸೆಳೆದರು.

by Editor
0 comments
karnataka cm

ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸುಮಾರು ಒಂದು ಗಂಟೆ ಕಾಲ ಮೇಷ್ಟ್ರು ಆಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನದ ಬಗ್ಗೆ ಪಾಠ ಮಾಡಿ ಗಮನ ಸೆಳೆದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಮುಖ್ಯಮಂತ್ರಿಗಳ ಪಾಠವನ್ನು ತದೇಕಚಿತ್ತದಿಂದ ಆಲಿಸಿದ ವಿದ್ಯಾರ್ಥಿಗಳು, ಹಲವಾರು ಪ್ರಶ್ನೆಗಳ ಮೂಲಕ ಸಂವಿಧಾನದ ಬಗ್ಗೆ ಇನ್ನಷ್ಟು ತಿಳಿದುಕೊಂಡರು.

ಸಂವಿಧಾನ ಓದು ಅಭಿಯಾನದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಸಿಎಂ ಪಾಠ ಮಾಡುವ ಮೂಲಕ ಗಮನ ಸೆಳೆದರು.

ಮುಖ್ಯಮಂತ್ರಿಗಳ ಪಾಠದ ಸಾರಾಂಶ…

banner

ಸಂವಿಧಾನದ ಶ್ರೇಷ್ಠತೆ ಮತ್ತು ವಿಫಲತೆ ಅದು ಯಾರ ಕೈಯಲ್ಲಿದೆ ಎನ್ನುವವರ ಆಧಾರದ ಮೇಲೆ ನಿರ್ಧಾರವಾಗುತ್ತದೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಮತ್ತು ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಕುವೆಂಪು ಅವರ ಮಾತುಗಳನ್ನು ಉಲ್ಲೇಖಿಸಿ ಪಾಠ ಮುಂದುವರೆಸಿದರು.

ಸಂವಿಧಾನದ ಬಗ್ಗೆ ಗೌರವ ಇಲ್ಲದವರ ಕೈಗೆ ಹೋದರೆ, ಎಷ್ಟೇ ಒಳ್ಳೆ ಸಂವಿಧಾನ ಆದರೂ ಪರಿಣಾಮ ಕೆಟ್ಟದಾಗಿರುತ್ತದೆ.

ಸಂವಿಧಾನದ ಪೀಠಿಕೆಯಲ್ಲೇ ಇಡೀ ಸಂವಿಧಾನದ ಸಾರಾಂಶ ಇದೆ. ಜಾತ್ಯತೀತತೆ, ಸಾಮಾಜಿಕ ನ್ಯಾಯ ಎರಡೂ ಮೂಲ ಸಂವಿಧನದಲ್ಲಿ ಇರಲಿಲ್ಲ. ಬಳಿಕ ಸೇರ್ಪಡೆಯಾಯಿತು. ಇದನ್ನು ತೆಗೆಯಬೇಕು ಎಂದು ಕೆಲವರು ಸುಪ್ರೀಂಕೋರ್ಟ್ ಗೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಿತು ಎಂದರು.

ಭಾರತ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮದವರಿಗೆ ಸಮಾನವಾಗಿ ನಡೆಸಿಕೊಳ್ಳುವುದು ನಮ್ಮ ದೇಶದ ಗುಣ. ಇದೇ ಸಂವಿಧಾನದ ಮೌಲ್ಯ ಎಂದರು.

ಭಾರತದಲ್ಲಿ ಅಸಮಾನತೆ ಸೃಷ್ಟಿಯಾಗಿದ್ದು ಜಾತಿ ವ್ಯವಸ್ಥೆಯಿಂದ. ಜಾತಿ ಆಧಾರದ ಮೇಲೆ ಒಬ್ಬರ ಯೋಗ್ಯತೆ ಅಳೆಯುವುದು ಅನಾಗರಿಕತನ.

ವಿದ್ಯೆ ಮತ್ತು ಸಂಪತ್ತು ಗಳಿಸುವ ಅವಕಾಶ ಶೂದ್ರರಿಗೆ ಮತ್ತು ಮಹಿಳೆಯರಿಗೆ ಇರಲಿಲ್ಲ. ಹೀಗಾಗಿ ಅಸಮಾನತೆ ಸೃಷ್ಟಿಯಾಯಿತು. ಅಪ್ಪ ಅಮ್ಮ ವಿದ್ಯಾವಂತರಾದರೆ ಮಾತ್ರ ಮಕ್ಕಳನ್ನೂ ವಿದ್ಯಾವಂತರನ್ನಾಗಿ ಮಾಡುತ್ತಾರೆ ಎನ್ನುತ್ತಾ ತಾವು ವಿದ್ಯಾಭ್ಯಾಸದಿಂದ ವಂಚಿತರಾಗಿ ಬಳಿಕ ವಿದ್ಯೆ ಕಲಿತು ವಕೀಲರಾದ ಪ್ರಸಂಗವನ್ನು ವಿವರಿಸಿದರು.

ನಮ್ಮ ಸಂವಿಧಾನದ ಹಕ್ಕುಗಳು ಏನೇನು ಅಂತ ಗೊತ್ತಿದ್ದರೆ ಮಾತ್ರ ಅವನ್ನು ಪಡೆದುಕೊಳ್ಳಬಹುದು. ಏಳು ಸ್ವಾತಂತ್ರ್ಯಗಳನ್ನು ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ನೀಡಿದೆ. ಇದನ್ನೆಲ್ಲಾ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದರು.

ಹೀಗಾಗಿ ಸಂವಿಧಾನ ಓದು ಅಭಿಯಾನವನ್ನು ರಾಜ್ಯಾದ್ಯಂತ ಆರಂಭಿಸಲಾಯಿತು ಎಂದರು. ಸಂವಿಧಾನದ ಧ್ಯೇಯೋದ್ದೇಶ ಮತ್ತು ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಕರೆ ನೀಡಿದರು.

ಸಂವಿಧಾನ ದ್ರೋಹಿಗಳು ಸಮಾಜ ದ್ರೋಹಿಗಳು, ಜನ ವಿರೋಧಿಗಳೂ ಕೂಡ ಹೌದು. ಜಾತಿ, ಧರ್ಮದ ಹೆಸರಲ್ಲಿ ಒಬ್ಬರನ್ನು ಅಗೌರವದಿಂದ ಕಾಣುವುದು, ಮತ್ತೊಬ್ಬರು ಸಂವಿಧನೇತರ ಗೌರವ ನಿರೀಕ್ಷಿಸುವುದು ತಪ್ಪು ಎಂದರು.

ಬಸವಣ್ಣನವರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ಮತ್ತು ಕರ್ಮಸಿದ್ದಾಂತವನ್ನು  ಧಿಕ್ಕರಿಸಿದ್ದಾರೆ. ಆದರೆ, ಇವತ್ತಿಗೂ ಇದು ಪೂರ್ತಿ ಹೋಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಂವಿಧಾನದಲ್ಲಿ ಕಂದಾಚಾರಗಳಿಗೆ ಅವಕಾಶವಿಲ್ಲ. ಒಂದು ಜಾತಿ, ಒಂದು ಧರ್ಮಕ್ಕೆ ಮಾತ್ರ ಈ ದೇಶ ಸೀಮಿತವಲ್ಲ ಎಂದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ರಾಜ್ಯದಲ್ಲಿ ಸಮಗ್ರ ಮರಳು ನೀತಿ ಜಾರಿ: ಕೈಗೆಟಕುವ ದರದಲ್ಲಿ ಮರಳು ದರ ನಿಗದಿಪಡಿಸಿ ಆದೇಶ ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ: 92 ಐವಿ ದ್ರಾವಣದಲ್ಲಿ ಫಂಗಸ್, ಬ್ಯಾಕ್ಟೀರಿಯಾ ಪತ್ತೆ! ವಿಚಾರಣೆಗೆ ಹಿಂದಿನ ದಿನ ಇಡಿ ಪತ್ರ ಬರೆದಿದ್ದೇ ಹೈಕೋರ್ಟ್ ಮೇಲೆ ಪ್ರಭಾವ ಬೀರಲು: ಸಿಎಂ ಸಿದ್ದರಾಮಯ್ಯ ‘ಮಹಾ’ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಆಯ್ಕೆ: ನಾಳೆ ಪ್ರಮಾಣ ವಚನ ಸ್ವೀಕಾರ! ಗೋಲ್ಡನ್ ಟೆಂಪಲ್ ಆವರಣದಲ್ಲಿಯೇ ಪಂಜಾಬ್ ಮಾಜಿ ಡಿಸಿಎಂ ಹತ್ಯೆಗೆ ಯತ್ನ! ಮಹಾರಾಷ್ಟ್ರ ಸಿಎಂ ಹೆಸರು ಘೋಷಿಸದೇ ನಾಳೆ ಪ್ರಮಾಣ ವಚನಕ್ಕೆ ಸಿದ್ಧತೆ! 6,6,6,6,6,6,6: `ಸೂರ್ಯ’ನ ಮುಂದೆ ಶಿವಂ’ ದುಬೆ ರುದ್ರತಾಂಡವ! ಈ ಬಾರಿ ದೇಶದಲ್ಲಿ ಚಳಿಗಾಲದಲ್ಲೂ ಬೀಸಲಿದೆ ಬಿಸಿಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಯುಪಿಯ 3 ಡಿಗ್ರಿ ಪದವೀಧರ! ನಕಲಿ ಗ್ರಾಹಕರ ಸೋಗಿನಲ್ಲಿ ಮೀಶೋ ಕಂಪನಿಗೆ 5.50 ಕೋಟಿಗೆ ವಂಚನೆ: ಮೂವರು ಗುಜರಾತಿಗಳು ಅರೆಸ್ಟ್!