Home ತಾಜಾ ಸುದ್ದಿ ಇಡಿ, ಸಿಬಿಐ, ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡು ಆಟ ಆಡ್ತೀರಾ: ಸಿಎಂ ಸಿದ್ದರಾಮಯ್ಯ ಗುಡುಗು

ಇಡಿ, ಸಿಬಿಐ, ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡು ಆಟ ಆಡ್ತೀರಾ: ಸಿಎಂ ಸಿದ್ದರಾಮಯ್ಯ ಗುಡುಗು

by Editor
0 comments
siddaraimah

ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನನ್ನ ಮತ್ತು ನನ್ನ ಪತ್ನಿಯನ್ನು ಬಿಜೆಪಿ ಟಾರ್ಗೆಟ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಬುಧವಾರ ಟಿ.ನರಸೀಪುರ  ವಿಧಾನಸಭಾ ಕ್ಷೇತ್ರದಲ್ಲಿ 470 ಕೋಟಿ ರೂ. ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಮತ್ತು ಕಟ್ಟಡಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ನೇರವಾಗಿ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.

ನಾನು ನೆನ್ನೆ ಮೊನ್ನೆ ಮಂತ್ರಿಯಾದವನಲ್ಲ. 40 ವರ್ಷದಿಂದ ಮಂತ್ರಿಯಾಗಿದ್ದೀನಿ. ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ. ರಾಜ್ಯದ ಜನ‌ರ ಆಶೀರ್ವಾದ ನನ್ನ  ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ. ನೀವೂ ಕೂಡ  ಸುಖಾ ಸುಮ್ಮನೆ ತಂಟೆಗೆ ಬಂದರೆ ಸುಮ್ಮನಿರಲ್ಲ ಎನ್ನುವ ಎಚ್ಚರಿಕೆ ಕೊಡಬೇಕಿದೆ ಎಂದು ಕರೆ ನೀಡಿದರು.

ಬಿಜೆಪಿ ಇವತ್ತಿನವರೆಗೂ ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ. ಈ ಬಾರಿ ಕಾಂಗ್ರೆಸ್ಸಿನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದಾರೆ. ಎಲ್ಲಿಂದ ಬರತ್ತೆ ಈ ಹಣ? ಯಡಿಯೂರಪ್ಪ, ಬೊಮ್ಮಾಯಿ, ಆರ್.ಅಶೋಕ್ ಪ್ರಿಂಟ್ ಹಾಕಿದ್ದಾ ಈ ಹಣ? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ. ಆದರೆ ನಮ್ಮ ಶಾಸಕರು ಇವರ ಆಮಿಷಕ್ಕೆ ಒಳಗಾಗಲಿಲ್ಲ ಎಂದರು.

banner

ಬಿಜೆಪಿಯವರು ಗ್ಯಾರಂಟಿಯ ಹಣ ತಗೊತಾ ಇಲ್ವಾ? ಎದೆ ಮುಟ್ಟಿಕೊಂಡು ಹೇಳಲಿ. ರಾಜ್ಯದಲ್ಲಿ ನಮ್ಮ ಐದೂ  ಗ್ಯಾರಂಟಿಗಳು ಯಶಸ್ವೀ ಜಾರಿ ಆದ ಬಳಿಕ  ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಾನಕ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ.

ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ 1 ಕೋಟಿ 20 ಲಕ್ಷ ರೂಪಾಯಿ ನೀಡಿದೆ.‌ ಇಂದು ನರಸೀಪುರದಲ್ಲಿ 470 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ.  ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ ಎಂದರು.

ಹೋಗಲಿ ಈ ಬಿಜೆಪಿಯವರಿಗೆ ನಾನು ನೇರವಾಗಿ ಒಂದು ಪ್ರಶ್ನೆ ಕೇಳ್ತೀನಿ. ರಾಜ್ಯದಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳ ಫಲಾನುಭವಿಗಳಲ್ಲವಾ? ಬಿಜೆಪಿಯವರು ಉಚಿತವಾಗಿ ಬಸ್ಸಲ್ಲಿ ಓಡಾಡುತ್ತಿಲ್ಲವಾ? ಬಿಜೆಪಿಯವರು ಉಚಿತ ವಿದ್ಯುತ್ ಪಡೆಯುತ್ತಿಲ್ಲವಾ ? ಬಿಜೆಪಿಯವರು ಗೃಹಲಕ್ಷ್ಮಿ ಹಣ ಪಡೆಯುತ್ತಿಲ್ಲವಾ?  ಇಲ್ಲಾ, ನಾವು ತಗೊತಾ ಇಲ್ಲ ಅಂತ ಬಿಜೆಪಿಯವರು ಎದೆ ಮುಟ್ಟಿಕೊಂಡು ಹೇಳಲಿ ನೋಡೋಣ ಎಂದು ಸವಾಲೆಸೆದ ಸಿಎಂ, ರಾಜ್ಯ ಸರ್ಕಾರದ ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ಕೋಟಿ ಕೋಟಿ ಫಲಾನುಭವಿಗಳು ನಿಮಗೆ ಸರಿಯಾದ ಪಾಠ ಕಲಿಸ್ತಾರೆ ಎಂದು ಎಚ್ಚರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಸಂಸದರಾದ ಸುನಿಲ್ ಬೋಸ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಹಲವು ಪ್ರಮುಖರು ಉಪಸ್ಥಿತರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಬೀಡಾಡಿ ಹಸುಗಳ ಕುತ್ತಿಗೆಗೆ ಬೆಳಕಿನ ಪಟ್ಟಿ: ಯುಪಿಯಲ್ಲಿ ವಿನೂತನ ಪ್ರಯೋಗ! Bigg Boss 11 ಟಿಆರ್ ಪಿಯಲ್ಲಿ ಬಿಗ್ ಬಾಸ್ ಹೊಸ ದಾಖಲೆ: ಸುದೀಪ್ ಕೊಟ್ಟ ವಿವರ ಏನು? ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ 2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ