Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ಎಚ್ ಡಿಕೆ ಬಂಧಿಸಲು ಒಬ್ಬ ಕಾನ್ಸ್ ಟೇಬಲ್ ಸಾಕು: ಸಿಎಂ ಸಿದ್ದರಾಮಯ್ಯ ತಿರುಗೇಟು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು
siddaramiah
siddaramiah

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯನ್ನು ಬಂಧಿಸೋಕೆ 100 ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ತಿರುಗೇಟು ನೀಡಿದರು.

ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು  ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು, ಆದರೆ ಅವರು ಇದುವರೆಗೆ ಮಾಡಿರುವ  ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು.

ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ  ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು. ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment