Thursday, November 21, 2024
Google search engine
Homeತಾಜಾ ಸುದ್ದಿಬಿಎಸ್‌ವೈ, ಶ್ರೀರಾಮುಲುಗೆ ಸಂಕಷ್ಟ: ಕೋವಿಡ್ ಹಗರಣದಲ್ಲಿ ಪ್ರಾಸಿಕ್ಯೂಷನ್ ತನಿಖೆಗೆ ಆಯೋಗ ಶಿಫಾರಸು

ಬಿಎಸ್‌ವೈ, ಶ್ರೀರಾಮುಲುಗೆ ಸಂಕಷ್ಟ: ಕೋವಿಡ್ ಹಗರಣದಲ್ಲಿ ಪ್ರಾಸಿಕ್ಯೂಷನ್ ತನಿಖೆಗೆ ಆಯೋಗ ಶಿಫಾರಸು

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕೋವಿಡ್‌-19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ ಕುನ್ಹಾ ನೇತೃತ್ವ ಆಯೋಗವು ಅಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ತನಿಖೆ ಮಾಡಲು ಶಿಫಾರಸು ಮಾಡಿದೆ.

ಏಪ್ರಿಲ್‌ 2020ರಲ್ಲಿ ಚೀನಾದ ಎರಡು ಕಂಪನಿಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ಅತ್ಯಂತ ದುಬಾರಿ ದರಗಳಲ್ಲಿ ಖರೀದಿಸಿದ್ದಕ್ಕೆ ಯಾವುದೇ ನಿಖರವಾದ ಕಾರಣವಿಲ್ಲ ಎಂಬ ಬಗ್ಗೆ ದಾಖಲೆಗಳ ಕುರಿತು ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಡಿ ಕುನ್ಹಾ ಅವರ ಶಿಫಾರಸು ಮಾಡಿದೆ.

ಪಿಪಿಇ ಕಿಟ್‌ ಖರೀದಿ ಪ್ರಕ್ರಿಯೆ ಸಂದರ್ಭ ಬಿ. ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು ಮತ್ತು ಬಿ. ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. 1988ರ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ವಿಶ್ವಾಸಾರ್ಹತೆ ಉಲ್ಲಂಘನೆ ಅಪರಾಧದ ಅನ್ವಯ ಸೆಕ್ಷನ್‌ 7 ಮತ್ತು 11ರ ಅಡಿ ತನಿಖೆ ನಡೆಸುವಂತೆ ಆಯೋಗವು ಶಿಫಾರಸು ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದೆ.

ಆಗಸ್ಟ್‌ 31ರಂದು ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ಪ್ರಸ್ತುತ ಸಂಪುಟದ ಉಪ ಸಮಿತಿಯು ವರದಿಯನ್ನು ಪರಿಶೀಲಿಸುತ್ತಿದೆ.

ಚೀನಾದಿಂದ ಪಿಪಿಇ ಕಿಟ್‌

ಚೀನಾದ ಡಿಎಚ್‌ಬಿ ಗ್ಲೋಬಲ್‌ ಹಾಂಗ್‌ ಕಾಂಗ್‌ ಮತ್ತು ಬಿಗ್‌ ಫಾರ್ಮಾಸ್ಯೂಟಿಕಲ್ಸ್‌ನಿಂದ ಪ್ರತಿ ಯನಿಟ್‌ಗೆ 2,000 ರೂ. ನಂತೆ 3 ಲಕ್ಷ ಪಿಪಿಇ ಕಿಟ್‌ಗಳನ್ನು ಖರೀದಿಸಲಾಗಿದೆ. ಈ ಖರೀದಿ ಪ್ರಕ್ರಿಯೆಯು ಯಾವುದೇ ಟೆಂಡರ್‌ ಕರೆಯದೆ ಅಥವಾ 1999ರ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆಯ ವಿನಾಯಿತಿಯನ್ನು ಪಡೆಯದೆ ನೇರವಾಗಿ ನಡೆದಿದೆ .

“ಸಂಗ್ರಹಣೆ ನಿಯಮದ ಮೂಲ ಕಾರ್ಯವಿಧಾನವನ್ನು ಅನುಸರಿಸದೆ ನೇರವಾಗಿ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರ ಆದೇಶದಂತೆ ಪಿಪಿಇ ಕಿಟ್‌ಗಳ ಸಂಗ್ರಹಣೆ ಮಾಡಲಾಗಿದೆ” ಎಂದು ವರದಿ ಹೇಳಿದೆ.

“ಪಿಪಿಇ ಕಿಟ್‌ ಖರೀದಿಯ ಇಡೀ ಪ್ರಕ್ರಿಯೆಯು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರ ಆಪ್ತ ಪೂರೈಕೆದಾರರಿಗೆ ಅನುಕೂಲ ಮತ್ತು ಲಾಭ ಮಾಡಿಕೊಡುವ ರೀತಿಯಲ್ಲಿ ನಡೆದಿದೆ” ಎಂದೂ ವರದಿ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments