Friday, October 4, 2024
Google search engine
Homeಅಪರಾಧನಾಪತ್ತೆಯಾಗಿದ್ದ ಆಪ್ತನಿಂದಲೇ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು!

ನಾಪತ್ತೆಯಾಗಿದ್ದ ಆಪ್ತನಿಂದಲೇ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು!

ಮಾಜಿ ಸಚಿವ ಎಚ್.ಡಿ.ರೇವಣ್ಣ ಕುಟುಂಬದ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನಕ್ಕೊಂದು ತಿರುವು ಪಡೆಯುತ್ತಿದ್ದು, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅವರ ಆಪ್ತನೇ ಪೊಲೀಸರಿಗೆ ದೂರು ನೀಡಿದ್ದಾರೆ.

ಸೂರಜ್ ರೇವಣ್ಣ ಪರ ಪೊಲೀಸರಿಗೆ ದೂರು ನೀಡಿದ್ದ ಶಿವಕುಮಾರ್ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರಿಂದ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು.

ಮಂಗಳವಾರ ದಿಢೀರನೆ ಕಾಣಿಸಿಕೊಂಡ ಶಿವಕುಮಾರ್, ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸರಿಗೆ ತನ್ನ ಮೇಲೂ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಸೂರಜ್ ರೇವಣ್ಣ ಆಪ್ತನಾಗಿ ಗುರುತಿಸಿಕೊಂಡಿದ್ದ ಶಿವಕುಮಾರ್, ನನ್ನನ್ನು ಒಂದು ವಾರ ಕಾಲ ಕೂಡಿ  ಹಾಕಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಅಲ್ಲದೇ ಪೊಲೀಸರಿಗೆ ದೂರು ನೀಡದಂತೆ 5 ಕೋಟಿ ನೀಡುವುದಾಗಿ ಆಮೀಷ ಒಡ್ಡಿದ್ದರು ಎಂದು ದೂರು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments