Kannadavahini

ಬಾರಿಸು ಕನ್ನಡ ಡಿಂಡಿಮವ

ಜಿಲ್ಲಾ ಸುದ್ದಿ ತಾಜಾ ಸುದ್ದಿ ಮನರಂಜನೆ

ಜೀವಂತ ಸುಡುವುದಾಗಿ ಪಂಚರ್ ಅಂಗಡಿಯವನಿಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ಅರೆಸ್ಟ್!

ನಟ ದರ್ಶನ್ ವಿರುದ್ಧ ಮಾತನಾಡಿದರೆ ಜೀವಂತವಾಗಿ ಸುಡುವುದಾಗಿ ಬೆದರಿಕೆ ಹಾಕಿದ್ದ ಯಾದಗಿರಿಯ ದರ್ಶನ್ ಜಿಲ್ಲೆಯ ಅಭಿಮಾನಿ ಸಂಘದ ಅಧ್ಯಕ್ಷನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಜುನನ್ನು ಯಾದಗಿರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದು ಮಾಡಿದರೆ ಜೀವಂತವಾಗಿ ಸುಟ್ಟು ಹಾಕುವುದಾಗಿ ಪಂಚರ್ ಅಡಿಯಲ್ಲಿ ಕೆಲಸ ಮಾಡುವ ಯುವಕನಿಗೆ ಬೆದರಿಕೆ ಹಾಕಿದ್ದ ರಾಜು ಈಗ ಪೊಲೀಸರ ವಶದಲ್ಲಿದ್ದಾನೆ.

ಗಂಗಾ ನಗರದ ನಿವಾಸಿ ಅಭಿ ಎಂಬ ಯುವಕನಿಗೆ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಾಜು ಇತ್ತೀಚೆಗೆ ಬೆದರಿಕೆ ಹಾಕಿದ್ದರು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಆಡಿಯೋದಲ್ಲಿ ರಾಜು, ಬಾಸ್ ಬಗ್ಗೆ ಮಾತನಾಡಿದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಅಭಿ, ಬಾಸ್ ಬಾಸ್ ಎಂದು ಬಕೆಟ್ ಯಾಕೆ ಹಿಡಿತೀರಿ, ತಾಯಿ-ತಂದೆಗೆ ಬಕೆಟ್ ಹಿಡಿಯಿರಿ ಎಂದು ಇನ್ಸ್ಟಾಗ್ರಾಮ್‍ನಲ್ಲಿ ಸ್ಟೇಟಸ್ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ರಾಜು, ಅಭಿಗೆ ಕರೆ ಮಾಡಿ, ವೀಡಿಯೋ ಡಿಲೀಟ್ ಮಾಡದೇ ಇದ್ರೆ ಜೀವಂತ ಸುಡೋದಾಗಿ ಬೆದರಿಸಿದ್ದಾನೆ. ಜೊತೆಗೆ ಕೂಡಲೇ ಕ್ಷಮೆ ಕೇಳಿ ವೀಡಿಯೋ ಮಾಡಿ ಹಾಕುವಂತೆ ಧಮ್ಕಿ ಹಾಕಿದ್ದಾನೆ. ಈ ವೇಳೆ ದೂರವಾಣಿ ಕರೆಯನ್ನ ರೆಕಾರ್ಡ್ ಮಾಡಿದ್ದನ್ನ ಆಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾನೆ ಎಂದು ಹೇಳಲಾಗಿದೆ.

LEAVE A RESPONSE

Your email address will not be published. Required fields are marked *