Monday, September 16, 2024
Google search engine
Homeತಾಜಾ ಸುದ್ದಿರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ 15 ಗಡುವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ 15 ಗಡುವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಭಾರೀ ಮಳೆಯಿಂದ ಗುಂಡಿ ಬಿದ್ದಿರುವ ಬೆಂಗಳೂರಿನ ರಸ್ತೆಯನ್ನು 15 ದಿನದೊಳಗಾಗಿ ದುರಸ್ತಿ ಮಾಡುವಂತೆ ಬೃಹತ್ ಬೆಂಗಳೂರು ನಗರ ಪಾಲಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ.

ಭಾನುವಾರ ಡಿಸಿಎಂ ಕಚೇರಿಯಿಂದ ಬಿಡುಗಡೆ ಮಾಡಲಾದ ಮಾಧ್ಯಮ ಪ್ರಕಟಣೆಯಲ್ಲಿ ರಸ್ತೆ ಗಂಡಿಗಳ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ.ಈ ಬಗ್ಗೆ ತುರ್ತಾಗಿ ಗಮನ ಹರಿಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.

ರಸ್ತೆ ಗುಂಡಿಗಳನ್ನು ಮುಚ್ಚುವ ಬಗ್ಗೆ ತುರ್ತಾಗಿ ಗಮನ ಹರಿಸಬೇಕು. ಈಗಾಗಲೇ ʻರಸ್ತೆ ಗುಂಡಿ ಗಮನʼ ಎನ್ನುವ ಆಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ ತೆಗೆದು ಅಪ್‌ಲೋಡ್‌ ಮಾಡುವ ವ್ಯವಸ್ಥೆ ಮಾಡಲಾಗಿದೆ.

ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಸಹ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆಗಳು ಗುಂಡಿ ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಸೂಚನೆ ನೀಡಿದ್ದಾರೆ.

ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ 15 ದಿನಗಳ ನಂತರ ಇಡೀ ಬೆಂಗಳೂರು ನಗರವನ್ನು ತಾವೇ ಸ್ವತಃ ಪ್ರದಕ್ಷಿಣೆ ಹಾಕಲಿದ್ದೇನೆ. ಪ್ರತಿ ರಸ್ತೆಗಳನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments