Sunday, December 7, 2025
Google search engine
Homeತಾಜಾ ಸುದ್ದಿಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆಯವರೆಗೆ ಹೊಸ ವರ್ಷದ ಪಾರ್ಟಿಗೆ ಪೊಲೀಸರಿಂದ ಡೆಡ್ ಲೈನ್!

ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆಯವರೆಗೆ ಹೊಸ ವರ್ಷದ ಪಾರ್ಟಿಗೆ ಪೊಲೀಸರಿಂದ ಡೆಡ್ ಲೈನ್!

ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆಯವರೆಗೆ ಹೊಸ ವರ್ಷ ಆಚರಿಸಲು ಗಡುವು ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಂಜಿ ರಸ್ತೆ, ಇಂದಿರಾನಗರ, ಜಯನಗರ, ಕೋರಮಂಗಲ ಸೇರಿದಂತೆ ಪ್ರತಿಷ್ಠಿತ ಬಡಾವಣೆಗಳಲ್ಲಿ ಮಧ್ಯರಾತ್ರಿ 2 ಗಂಟೆ ನಂತರ ಮಾಡುವಂತಿಲ್ಲ ಎಂದು ಅವರು ಹೇಳಿದರು.

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದ್ದು, 800 ಜನರಿಗಿಂತ ಹೆಚ್ಚು ಜನರು ಇರುವ ಕಡೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗುವುದು. ಹೈರೆಸ್ಯೂಲಷನ್ ಕ್ಯಾಮರಾಗಳ ಮೂಲಕ ನಿಗಾ ವಹಿಸಲಾಗುವುದು. ಹೆಚ್ಚುವರಿ ಪೊಲೀಸ್ ಭದ್ರತೆ ಕೂಡ ಒದಗಿಸಲಾಗಿದೆ ಎಂದು ಅವರು ಹೇಳಿದರು.

ಮಹಿಳೆಯರ ಸುರಕ್ಷತೆಗೆ ಹೆಚ್ಚು ಒತ್ ನೀಡಲಾಗಿದ್ದು, ಮಾಸ್ಕ್ ಧರಿಸಿ ಪೀಪೀ ಊದುತ್ತಾ ಹೋಗುವುದನ್ನು ನಿಷೇಧಿಸಲಾಗಿದೆ. ಮಾಸ್ಕ್ ಧರಿಸಿದವರನ್ನು ಎಚ್ಚರಿಸಲಾಗುವುದು. ಅಗತ್ಯ ಬಿದ್ದರೆ ಲಾಠಿ ಚಾರ್ಜ್ ಕೂಡ ಮಾಡಲಾಗುವುದು ಎಂದು ಆಯುಕ್ತ ದಯಾನಂದ್ ಎಚ್ಚರಿಸಿದರು.

ಬೆಂಗಳೂರಿನ ಎಲ್ಲಾ ಮೇಲ್ಸೆತುವೆಗಳನ್ನು ರಾತ್ರಿ 9 ಗಂಟೆ ನಂತರ ಬಂದ್ ಮಾಡಲಾಗುವುದು. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಮೇಲ್ಸೆತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಹೋಗುವ ಮೇಲ್ಸೇತುವೆ ಮೇಲೆ ವಾಹನ ನಿಷೇಧಿಸಲಾಗಿದ್ದು, ದ್ವಿಚಕ್ರ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments