Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ಕೇಂದ್ರದಿಂದ ಬಾಕಿ ಇರುವ ಕ್ಯಾಂಪಾ ಅನುದಾನಕ್ಕಾಗಿ ಕರ್ನಾಟಕ-ಕೇರಳ ಜಂಟಿ ಮನವಿಗೆ ನಿರ್ಧಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 40 ವೀಕ್ಷಣೆಗಳು

ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ ಇದಕ್ಕೆ ನೀಡುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ನಡೆದ ಸಚಿವರ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಬಾಕಿ ಇರುವ ಕ್ಯಾಂಪಾ ಹಣವನ್ನು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕಾಗಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದರು.

ಕೇರಳದ ಅರಣ್ಯ ಸಚಿವ ಎ.ಕೆ. ಸಸೀಂದ್ರನ್ ಈ ಉಪಕ್ರಮದ ನೇತೃತ್ವವನ್ನು ತಾವು ವಹಿಸುವುದಾಗಿ ಸ್ವಯಂ ಪ್ರೇರಿತವಾಗಿ ಪ್ರಕಟಿಸಿದರು. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಅರಣ್ಯ ಸಚಿವರನ್ನೂ ಕರೆದುಕೊಂಡು ದೆಹಲಿಗೆ ನಿಯೋಗ ತೆರಳುವ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ದಿನಾಂಕ ನಿಗದಿ ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದರು. ಸಭೆ ಸಮ್ಮತಿಸಿತು.

ಲಾಂಟನಾ ಮತ್ತು ಸನ್ನಾ ಸಮಸ್ಯೆ ಪರಿಹಾರಕ್ಕೆ ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಚರ್ಚೆಯ ವೇಳೆ, ನಿರಂತರವಾಗಿ ಲಾಂಟನಾವನ್ನು ಮೂಲೋತ್ಪಾಟನೆ ಮಾಡುವುದೇ ಪರಿಹಾರ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಕೆಲವು ಆದಿವಾಸಿಗಳು ಲಾಂಟನಾದಿಂದ ಅಲಂಕಾರಿಕ ವಸ್ತು ಮತ್ತು ವನ್ಯಮೃಗಗಳ ಪ್ರತಿಕೃತಿ ನಿರ್ಮಾಣ ಮಾಡುತ್ತಿದ್ದು, ಅವರೇ ಸ್ವತಃ ಮುಂದೆ ಬಂದು ಲಾಂಟನಾ ಕಳೆ ತೆಗೆಯುವುದಾದರೆ ಅವರಿಗೆ ಅವಕಾಶ ಕೊಡುವ ಬಗ್ಗೆಯೂ ಚರ್ಚಿಸಲಾಯಿತು.

ಆನೆ-ಮಾನವ ಸಂಘರ್ಷದಲ್ಲಿ ಮೃತಪಟ್ಟವರಿಗೆ ಮತ್ತು ಬೆಳೆ ನಷ್ಟಕ್ಕೊಳಗಾದವರಿಗೆ ನೀಡಲಾಗುತ್ತಿರುವ ಪರಿಹಾರ,  ಆನೆಗಳು ನಾಡಿಗೆ ಬಾರದಂತೆ ತಡೆಯಲು ಯಾವ ಯಾವ ರಾಜ್ಯದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಈಶ್ವರ ಖಂಡ್ರೆ ಅವರು ಇತರ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.

ಜಾರ್ಖಂಡ್ ನ ಅರಣ್ಯ ಸಚಿವ ಬೈದ್ಯನಾಥ್ ರಾಮ್, ತಮಿಳುನಾಡು ಅರಣ್ಯ ಸಚಿವ ಎಂ. ಮಥಿವೆಂಥನ್, ತೆಲಂಗಾಣ ಅರಣ್ಯ ಸಚಿವೆ ಕೊಂಡ ಸುರೇಖಾ ಪಾಲ್ಗೊಂಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment