Friday, May 17, 2024
Google search engine
Homeಕ್ರೀಡೆಐಪಿಎಲ್: ಕೆಕೆಆರ್ ಗೆ ಸುಲಭ ತುತ್ತಾದ ಡೆಲ್ಲಿ ಕ್ಯಾಪಿಟಲ್ಸ್!

ಐಪಿಎಲ್: ಕೆಕೆಆರ್ ಗೆ ಸುಲಭ ತುತ್ತಾದ ಡೆಲ್ಲಿ ಕ್ಯಾಪಿಟಲ್ಸ್!

ಸ್ಪಿನ್ನರ್ ಗಳ ಸಹಾಯದಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಮತ್ತಷ್ಟು ಭದ್ರಪಡಿಸಿಕೊಂಡಿದೆ.

ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್ ಗಳಿಸಿತು. ಸುಲಭ ಗುರಿ ಬೆಂಬತ್ತಿದ ಕೆಕೆಆರ್ 3.3 ಓವರ್ ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಕೆಕೆಆರ್ ತಂಡಕ್ಕೆ ಫಿಲ್ ಸಾಲ್ಟ್ ಕನಸಿನ ಆರಂಭ ನೀಡಿದರು. ಸಾಲ್ಟ್ 33 ಎಸೆತಗಳಲ್ಲಿ 7 ಬೌಂಡರಿ ಮತ್ತು 5 ಸಿಕ್ಸರ್ ಸೇರಿದ 68 ರನ್ ಚಚ್ಚಿದರು. ಅಲ್ಲದೇ ಸುನೀಲ್ ನರೇನ್ (15) ಜೊತೆ ಮೊದಲ ವಿಕೆಟ್ ಗೆ 79 ರನ್ ಜೊತೆಯಾಟ ನಿಭಾಯಿಸಿದರು.

ನಂತರ ನಾಯಕ ಶ್ರೇಯಸ್ ಅಯ್ಯರ್ ಮತ್ತು ವೆಂಕಟೇಶ್ ಅಯ್ಯರ್ ಅಜೇಯರಾಗಿ ತಂಡವನ್ನು ಗೆಲುವಿನ ದಡ ತಲುಪಿಸಿದರು. ಶ್ರೇಯಸ್ ಅಯ್ಯರ್ 23 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ 33 ರನ್ ಗಳಿಸಿದರೆ, ವೆಂಕಟೇಶ್ ಅಯ್ಯರ್ 23 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ 26 ರನ್ ಬಾರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments