Home ಜಿಲ್ಲಾ ಸುದ್ದಿ ದೇವೇಗೌಡರೇ ನಿಮ್ಮ ಪಾಳೆಗಾರಿಕೆ-ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ: ಸಿಎಂ ಸಿದ್ದರಾಮಯ್ಯ

ದೇವೇಗೌಡರೇ ನಿಮ್ಮ ಪಾಳೆಗಾರಿಕೆ-ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ: ಸಿಎಂ ಸಿದ್ದರಾಮಯ್ಯ

by Editor
0 comments
yogeshwar

ಚನ್ನಪಟ್ಟಣ: ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಮಣ್ಣಿನ ಬಗ್ಗೆ, ಇಲ್ಲಿನ ರೈತ ಸಮುದಾಯದ ಬಗ್ಗೆ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ ಮೇಲೆ ಅಪಾರ ಪ್ರೀತಿ ಮತ್ತು ಗೌರವ ಹಾಗೂ ಕಾಳಜಿ ಇಟ್ಟುಕೊಂಡಿದ್ದಾರೆ. ಹೀಗಾಗಿ ರೈತ ಕುಲದ ಉದ್ದಾರಕ್ಕಾಗಿ ಕೆರೆಗಳನ್ನು ತುಂಬಿಸಿ ಪುಣ್ಯಾತ್ಮ‌ ಎನ್ನಿಸಿಕೊಂಡರು ಎಂದು ಮೆಚ್ಚುಗೆ ಸೂಚಿಸಿದರು.

ಮಂಡ್ಯ ಲೋಕಸಭೆಯಲ್ಲಿ, ರಾಮನಗರ ವಿಧಾನಸಭೆಯಲ್ಲಿ ನಿಖಿಲ್ ಸೋತಿದ್ದಾರೆ. ಈಗ ಚನ್ನಪಟ್ಟಣಕ್ಕೆ ಕರೆತಂದು ನಿಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಭಾವ, ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರ ಗೆಲುವಿಗೆ ಯೋಗೇಶ್ವರ್ ಅವರು ಬಹಳ ಶ್ರಮಿಸಿದರು. ಆಗಲೇ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರಿಗೆ ಬೆಂಬಲಿಸಿ ಗೆಲ್ಲಿಸುವ ಭರವಸೆ ನೀಡಿದ್ದರು. ಆದರೆ ಚುನಾವಣೆ ಬಂದಾಗ ಕೈ ಕೊಟ್ಟರು ಎಂದು ವ್ಯಂಗ್ಯವಾಡಿದರು.‌

ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಬ್ಬೇ ಒಬ್ಬ ಒಕ್ಕಲಿಗರನ್ನೂ ಬೆಳೆಯಲು ಬಿಡಲ್ಲ. ನಾನು ಹಿಂದುಳಿದವನು ಅಂತ ನನ್ನನ್ನು ವಿರೋಧಿಸ್ತಾರೆ, ಓಕೆ. ಆದರೆ, ವೈ.ಕೆ.ರಾಮಯ್ಯ, ನಾಗೇಗೌಡ, ಬಚ್ಚೇಗೌಡ, ವರದೇಗೌಡ, ಪಟ್ಟಣ್ಣ, ಚಲುವರಾಯಸ್ವಾಮಿ, ಬಾಲಕೃಷ್ಣ, ಭೈರೇಗೌಡ, ಕೆ.ಆರ್.ಪೇಟೆ ಚಂದ್ರಶೇಖರ್ ಸೇರಿ ಸಾಲು ಸಾಲು ಒಕ್ಕಲಿಗರನ್ನು ರಾಜ್ಯದಲ್ಲಿ ಮುಗಿಸಿದರು. ರಾಜ್ಯದಲ್ಲಿ ಒಕ್ಕಲಿಗ ನಾಯಕತ್ವವೇ ಬೆಳೆಯದಂತೆ ಮಾಡುತ್ತಿದ್ದಾರೆ ಎಂದರು.

banner

ಬುದ್ದವಂತ ಒಕ್ಕಲಿಗರು, ರಾಜಕೀಯ ಪ್ರಜ್ಞೆ ಇರುವ ಒಕ್ಕಲಿಗರು ಯಾರನ್ನೂ ದೇವೇಗೌಡರು ಬೆಳೆಯಲು ಬಿಡದೆ ಮುಗಿಸ್ತಾರೆ. ಈಗ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರನ್ನೂ ಮುಗಿಸುವ ಪರಯತ್ನ ಮಾಡ್ತಿದ್ದಾರೆ. ಆದರೆ ಇದು ಆಗಲ್ಲ. ನಾನು ಜಿ.ಟಿ.ದೇವೇಗೌಡರಿಗೂ ಎಚ್ಚರಿಸಿದ್ದೀನಿ. ಅಲ್ಲಿದ್ದರೆ ಮುಗಿಸ್ತಾರೆ. ಬೇಗ ಹೊರಗೆ ಬಂದ್ರೆ ನಿಮಗೆ ಒಳ್ಳೆಯದು ಎಂದು ಎಚ್ಚರಿಸಿದ್ದೀನಿ. ಮನೆ ಮಗ ಅಂತಿದ್ದ ಬಿ.ಎಲ್.ಶಂಕರ್, ವೈ.ಕೆ.ರಾಮಯ್ಯ ಅವರನ್ನೇ ಮುಗಿಸಿದವರು ಇನ್ನು ಯೋಗೇಶ್ವರ್ ಅವರನ್ನು ಸಹಿಸ್ತಾರಾ ಎಂದರು.

ಮೋದಿಯಂಥಾ ಸುಳ್ಳುಗಾರ ಇಲ್ಲ ಅಂದಿದ್ದ ದೇವೇಗೌಡರು

ಭಾರತ ಮೋದಿಯವರಂತಹಾ ಸುಳ್ಳ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ದೇವೇಗೌಡರು ಹೇಳಿದ್ದರು. ಈಗ ಮೋದಿಯವರನ್ನು ಯದ್ವಾತದ್ವಾ ಹೊಗಳುತ್ತಿದ್ದಾರೆ ಎಂದು ಛೇಡಿಸಿದರು.‌

ನಾನು, ಜಾಲಪ್ಪ ಅವರು ಇಲ್ಲದೇ ಹೋಗಿದ್ದರೆ 1994 ರಲ್ಲಿ ದೇವೇಗೌಡರು ಮುಖ್ಯಮಂತ್ರಿ ಆಗಲು ಸಾಧ್ಯವೇ ಇರಲಿಲ್ಲ. ದೇವೇಗೌಡರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ರಾಷ್ಟ್ರೀಯ ಅಧ್ಯಕ್ಷರಾದ ಎಸ್.ಆರ್.ಬೊಮ್ಮಾಯಿ ಸಿದ್ದರಿರಲಿಲ್ಲ. ಏಕೆಂದರೆ ಇವರು ಬೊಮ್ಮಾಯಿ ಸರ್ಕಾರವನ್ನು ಕೆಡವಿದ್ದರು. ಆದರೂ ಆ ಸಂದರ್ಭದಲ್ಲಿ ನಾವೆಲ್ಲಾ ಒಟ್ಟಾಗಿ ದೇವೇಗೌಡರ ಪರವಾಗಿ ನಿಂತೆವು. ಈಗ ಸಿದ್ದರಾಮಯ್ಯ ಅವರಿಗೆ ಸೊಕ್ಕು, ಅಹಂ ಎನ್ನುತ್ತಿದ್ದಾರೆ. ಇದು ಪಾಳೇಗಾರಿಕೆ ಅಲ್ವಾ ದೇವೇಗೌಡರೇ ಎಂದು ಪ್ರಶ್ನಿಸಿದರು.

ಆಕಸ್ಮಿಕವಾಗಿ ಪ್ರಧಾನಿ ಆದ ದೇವೇಗೌಡರು ಪಾಳೆಗಾರಿಕೆ ಮಾತ್ರ ಬಿಡಲ್ಲ. ದಲಿತರು, ಹಿಂದುಳಿದವರನ್ನು ಕಂಡ್ರೆ ಆಗಲ್ಲ. ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ. ಇದೆಲ್ಲಾ ಪಾಳೇಗಾರಿಕೆ ಅಲ್ವಾ ? ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ ಬಿಜೆಪಿ ಯಿಂದ ಬೇರೆ ಯಾರಾದರೂ ನಿಂತಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಚನ್ನಪಟ್ಟಣದಲ್ಲಿ ನಿಂತು ಮತ ಕೇಳ್ತಿದ್ರಾ ? NDA ಅಭ್ಯರ್ಥಿಯಾಗಿ ಯೋಗೇಶ್ವರ್ ಸ್ಪರ್ಧಿಸಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಇದ್ದು ಮತ ಕೇಳ್ತಿದ್ರಾ ಎಂದು ಪ್ರಶ್ನಿಸಿದರು.

ಇರಲಿ, ಚನ್ನಪಟ್ಟಣಕ್ಕೆ ಏನು ಮಾಡಿದ್ದೀರಿ ಎನ್ನುವುದನ್ನು ಕ್ಷೇತ್ರದ ಜನತೆ ಕೇಳಬೇಕು. ಬರೀ ಕಣ್ಣೀರು ಹಾಕೋದಲ್ಲ. ಅತ್ಯಾಚಾರಕ್ಕೆ ಒಳಗಾದ ಹಾಸನದ ಹೆಣ್ಣು‌ಮಕ್ಕಳ ಪರವಾಗಿ ಕಣ್ಣೀರೇ ಬರಲಿಲ್ಲ ಪಾಪ ದೇವೇಗೌಡರಿಗೆ ಎಂದರು.

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆದೆ ಅಂತ ದೇವೇಗೌಡರಿಗೆ ಹೊಟ್ಟೆಯುರಿ. ಅದಕ್ಕೇ ನಮ್ಮ ಸರ್ಕಾರ ಕಿತ್ತಾಕುತ್ತೇವೆ ಎನ್ನುತ್ತಿದ್ದಾರೆ. ರಾಜ್ಯದ ಜನತೆ ಆರಿಸಿರುವ ನಮ್ಮ‌ ಸರ್ಕಾರವನ್ನು ಕುಮಾರಸ್ವಾಮಿ, ದೇವೇಗೌಡರಿಂದ ಕೀಳಲು ಸಾಧ್ಯವಿಲ್ಲ. ನಿಮ್ಮ ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ ಹೊರತು ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ ದೇವೇಗೌಡರೇ ಎಂದರು.

ಮೊದಲ ಬಾರಿ ಸಿಎಂ ಆಗಿ ಹತ್ತು ಹಲವು ಭಾಗ್ಯಗಳನ್ನು ನೀಡಿದೆ. ಎರಡನೇ ಬಾರಿ ಸಿಎಂ ಆಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ನಮ್ಮ ಸಾಧನೆಯ ಸಾಕ್ಷಿ ರಾಜ್ಯದ ಜನತೆಯ ಎದುರಿಗೆ ಇಟ್ಟಿದ್ದೀವಿ.

ನೀವು ಏನು ಸಾಧನೆ ಮಾಡಿದ್ದೀರಿ ಅಂತ ಚನ್ನಪಟ್ಟಣ ಜನತೆಯ ಎದುರು ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಿದ್ದೀರಿ ಎಂದು ಪ್ರಶ್ನಿಸಿದರು.

400 ಕೋಟಿ ವೆಚ್ಚದ ಹಾಲಿನ ಪುಡಿ ಘಟಕ ಮಾಡಿದ್ದು ನಾವು. ಕನಕಪುರದಲ್ಲಿ 2016 ರಲ್ಲಿ ಡೈರಿ ಸಂಕೀರ್ಣವನ್ನು 700 ಕೋಟಿ ರೂ ವೆಚ್ಚದಲ್ಲಿ ಮಾಡಿದ್ದು ನಾವು. ಇಂಥವು ಇನ್ನೂ ಪಟ್ಟಿ ದೊಡ್ಡದಿದೆ. ಕುಮಾರಸ್ವಾಮಿ ಅವರು ಇಂಥಾ ಒಂದೇ ಒಂದನ್ನು ಮಾಡಿದ್ದಾರಾ ಹೇಳಿ ದೇವೇಗೌಡರೇ . ಇದನ್ನು ಚನ್ನಪಟ್ಟಣ ಜನತೆ ಕೂಡ ಕೇಳಬೇಕು ಎಂದು ಕರೆ ನೀಡಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಶಾಲೆಯ ಮುಖ್ಯೋಪಾಧ್ಯಯರಿಗೆ ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ! ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ! ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ! ಕಾಂಗ್ರೆಸ್ ಸಂಸದರ ಆಸನದಲ್ಲಿ ನೋಟಿನ ಕಂತೆ ಪತ್ತೆ: ರಾಜ್ಯಸಭೆಯಲ್ಲಿ ಕೋಲಾಹಲ 2025ರ ಶೈಕ್ಷಣಿಕ ಪ್ರವೇಶಾತಿಗೆ ವರ್ಲ್ಡ್ ಯುನಿವರ್ಸಿಟಿ ಆಫ್ ಡಿಸೈನ್ ಸಂಸ್ಥೆಯಿಂದ ಅರ್ಜಿ ಆಹ್ವಾನ