ಮಹತ್ವದ ಬೆಳವಣಿಗೆಯೊಂದರಲ್ಲಿ ಹಿಮಾಚಲ ಪ್ರದೇಶ ರಾಜ್ಯ ಘಟಕದ ಕಾಂಗ್ರೆಸ್ ಘಟಕವನ್ನು ವಿಸರ್ಜಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಎಕ್ಸ್ ನಲ್ಲಿ ಬುಧವಾರ ಟ್ವೀಟ್ ಮಾಡಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಘಟಕವನ್ನು ವಿಸರ್ಜಿಸಲು ಕಾಂಗ್ರೆಸ್ ಅಧ್ಯಕ್ಷರು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿಸಿದ್ದಾರೆ.
ದಿವಂಗತ ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ಹಿಮಾಚಲ ಪ್ರದೇಶ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ರಾಜ್ಯ ಪದಾಧಿಕಾರಿಗಳು, ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿ ಮಟ್ಟದ ಎಲ್ಲಾ ಪದಾಧಿಕಾರಿಗಳನ್ನು ವಜಾ ಮಾಡಲಾಗಿದೆ.
2019ರಲ್ಲಿ ಕೂಡಾ ಇದೇ ರೀತಿ ರಾಜ್ಯ ಘಟಕವನ್ನು ಕಾಂಗ್ರೆಸ್ ವಿಸರ್ಜಿಸಿತ್ತು. ಕುಲದೀಪ್ ಸಿಂಗ್ ಆಗ ರಾಜ್ಯಾಧ್ಯಕ್ಷರಾಗಿದ್ದು, ನಂತರ ಅವರನ್ನು ಪುನರಾಯ್ಕೆ ಮಾಡಲಾಗಿತ್ತು.