Monday, May 11, 2026
Home ಜಿಲ್ಲಾ ಸುದ್ದಿ ಪೆನ್ ಡ್ರೈವ್ ರಿಲೀಸ್ ಗೆ ಡಿಕೆ ಶಿವಕುಮಾರ್ 100 ಕೋಟಿ ಆಫರ್ ಕೊಟ್ಟಿದ್ದರು: ಬಿಜೆಪಿ ವಕೀಲ ದೇವರಾಜೇಗೌಡ ಬಾಂಬ್

ಪೆನ್ ಡ್ರೈವ್ ರಿಲೀಸ್ ಗೆ ಡಿಕೆ ಶಿವಕುಮಾರ್ 100 ಕೋಟಿ ಆಫರ್ ಕೊಟ್ಟಿದ್ದರು: ಬಿಜೆಪಿ ವಕೀಲ ದೇವರಾಜೇಗೌಡ ಬಾಂಬ್

by Vahini
0 comments

ಬಿಜೆಪಿ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ಹೆಸರಿಗೆ ಕಳಂಕ ತರಲು ಪೆನ್ ಡ್ರೈವ್ ರಿಲೀಸ್ ಮಾಡಲು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನನಗೆ 100 ಕೋಟಿ ರೂ. ಆಫರ್ ಮಾಡಿದ್ದರು ಎಂದು ಬಿಜೆಪಿ ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ.

ಹಾಸನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ನನ್ನನ್ನು ಕರೆಸಿ ಪೆನ್ ಡ್ರೈವ್ ವಿಷಯದ ಬಗ್ಗೆ ಮಾತನಾಡಿದ್ದರು. ಎಚ್.ಡಿ. ಕುಮಾರಸ್ವಾಮಿ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಲು ಹೇಳಿದರು.

ಪೆನ್‌ ಡ್ರೈವ್‌ನ ಕುಮಾರಸ್ವಾಮಿ ಹಂಚಿದ್ರು ಅಂತಾ ಹೇಳು. ನಿನಗೆ ಸಮಸ್ಯೆ ಆಗಲ್ಲ. ಸೆಕ್ಯೂರ್ ಮಾಡ್ತಿನಿ ಅಂತ ಭರವಸೆ ನೀಡಿದ ಡಿಕೆ ಶಿವಕುಮಾರ್ ಅವರೇ ಪೆನ್ ಡ್ರೈವ್ ಮಾಡಿಸಿದ್ದು ಎಂದು ದೇವರಾಜೇಗೌಡ ಆರೋಪಿಸಿದರು.

– ನನಗೆ 100 ಕೋಟಿ ಆಫರ್‌ ಕೊಟ್ಟು, 5 ಕೋಟಿ ಅಡ್ವಾನ್ಸ್‌ ನೀಡಿದ್ದರು – ಕುಮಾರಸ್ವಾಮಿ ಪೆನ್‌ಡ್ರೈವ್‌ ಹಂಚಿದ್ರು ಅಂತಾ ಹೇಳುವಂತೆ ಡಿಕೆಶಿ ಹೇಳಿದ್ದರು ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಹೊಸ ಬಾಂಬ್‌ ಸಿಡಿಸಿದ್ದಾರೆ.

ಡಿಕೆ ಶಿವಕುಮಾರ್ ನನಗೆ 100 ಕೋಟಿ ರೂ. ಆಫರ್ ಮಾಡಿದ್ದರು. ಬೌರಿಂಗ್ ಕ್ಲಬ್ ನಲ್ಲಿ ಕರೆಸಿ 5 ಕೋಟಿ ರೂ. ಅಡ್ವಾನ್ಸ್ ಕೂಡ ಮಾಡಿದ್ದರು ಎಂದು ಅವರು ಹೇಳಿದರು.

ಕಾರ್ತಿಕ್ ಕರೆಸಿಕೊಂಡು ಸಂಪೂರ್ಣ ಮಾಹಿತಿ ಪಡೆದು ಪೆನ್‌ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ನಾಲ್ಕು ಜನ ಮಂತ್ರಿಗಳ ಕಮಿಟಿ ಮಾಡಿದರು. ಚೆಲುವರಾಯಸ್ವಾಮಿ, ಕೃಷ್ಣಭೈರೇಗೌಡ, ಪ್ರಿಯಾಂಕ್‌ ಖರ್ಗೆ ಮತ್ತು ಇನ್ನೊಬ್ಬ ಸಚಿವರು. ನಾಲ್ಕು ಮಂತ್ರಿಗಳ ತಂಡ ರಚನೆ ಮಾಡಿ ಇದನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ರು ಎಂದು ದೂರಿದ್ದಾರೆ.

ನಾನು ಒಪ್ಪದೇ ಇದ್ದಾಗ, ಈಗಾಗಲೇ ದೊಡ್ಡ ಹಗರಣ ಆಗಿರುವುದರಿಂದ ಮೋದಿಗೆ, ಬಿಜೆಪಿಗೆ, ಕುಮಾರಸ್ವಾಮಿಗೆ ಕೆಟ್ಟ ಹೆಸರು ತರಲು ಮಾಡಿದ್ರು. ನನಗೆ ಸುಮಾರು ನೂರು ಕೋಟಿ ಆಫರ್ ಕೊಟ್ರು. ಐದು ಕೋಟಿ ರೂಪಾಯಿ ಅಡ್ವಾನ್ಸ್ ದುಡ್ಡನ್ನ ಬೌರಿಂಗ್ ಕ್ಲಬ್‌ನ 110 ರೂಂಗೆ ಕಳಿಸಿದ್ದರು ಎಂದು ತಿಳಿಸಿದ್ದಾರೆ.

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign