Thursday, September 19, 2024
Google search engine
Homeತಾಜಾ ಸುದ್ದಿಇ-ಸ್ವತ್ತು ತಂತ್ರಾಂಶ ಅಪ್ ಡೇಟ್ ಪ್ರಗತಿ: ಜುಲೈ 30ರಂದು ಸೇವೆ ಸ್ಥಗಿತ

ಇ-ಸ್ವತ್ತು ತಂತ್ರಾಂಶ ಅಪ್ ಡೇಟ್ ಪ್ರಗತಿ: ಜುಲೈ 30ರಂದು ಸೇವೆ ಸ್ಥಗಿತ

ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವ ಪ್ರಕ್ರಿಯೆ ಮುಂದುವರೆದಿದ್ದು, ಜುಲೈ 30ರಂದು ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸಾರ್ವಜನಿಕರ ಸಹಕಾರ ಕೋರಿರುವ ಸಚಿವರು ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದೂ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗುತ್ತಿದ್ದು ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿರು.

ಸಚಿವರು ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆಫ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments