Kannadavahini

ಬಾರಿಸು ಕನ್ನಡ ಡಿಂಡಿಮವ

azim premji
ತಾಜಾ ಸುದ್ದಿ ಬೆಂಗಳೂರು

ಅಜಿಂ ಪ್ರೇಮ್ ಜಿ ಪ್ರತಿಷ್ಠಾನದಿಂದ ರಾಜ್ಯದ ಶಾಲೆಗಳಿಗೆ ವಾರದಲ್ಲಿ 4 ದಿನ ಮೊಟ್ಟೆ ವಿತರಣೆ

ಉದ್ಯಮಿ ಅಜೀಂ ಪ್ರೇಮ್ ಜಿ ಪ್ರತಿಷ್ಠನ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ವಾರದಲ್ಲಿ 4 ದಿನ ಮೊಟ್ಟೆ ವಿತರಿಸಲಿದೆ.

ರಾಜ್ಯ ಸರ್ಕಾರದೊಂದಿಗೆ ಅಜಿಂ ಪ್ರೇಮ್ ಜಿ ಪ್ರತಿಷ್ಠಾಪ ಮೊಟ್ಟೆ ವಿತರಿಸಲು ಒಪ್ಪಂದ ಮಾಡಿಕೊಂಡಿದ್ದು, ವಾರದ 4 ದಿನ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ವಿತರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ  ಆಹಾರ ಅಗತ್ಯ ಇರುವ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳಿಗೆ ಮೊಟ್ಟೆ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಲಾಗಿದೆ ಎಂದರು.

ಇದೇ ವೇಳೆ ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇತುವೆ ಪರಿಶೀಲಿಸಲು  ನಾಳೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

LEAVE A RESPONSE

Your email address will not be published. Required fields are marked *