Friday, May 17, 2024
Google search engine
Homeತಾಜಾ ಸುದ್ದಿರಾಜ್ಯದ 6 ವಿಧಾನ ಪರಿಷತ್ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ಘೋಷಣೆ

ರಾಜ್ಯದ 6 ವಿಧಾನ ಪರಿಷತ್ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ಘೋಷಣೆ

ವಿಧಾನಪರಿಷತ್ 6 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ.

ಗುರುವಾರ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಲಾಗಿದ್ದು, ಜೂನ್ 6ರಂದು ಮತ ಎಣಿಕೆ ನಡೆಯಲಿದೆ.

ಜೂನ್ 21ರಂದು ಶಿಕ್ಷಕರ ಕ್ಷೇತ್ರದ ಮೂವರು ಮತ್ತು 3 ಪದವೀಧರ ಕ್ಷೇತ್ರದ ಪರಿಷತ್ ಸ್ಥಾನದ ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದೆ. ತೆರವಾದ 6 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಡಾ.ಚಂದ್ರಶೇಖರ್ ಬಿ ಪಾಟೀಲ್, ಆಯನೂರು ಮಂಜುನಾಥ್ ಮತ್ತು ಎ.ದೇವೇಗೌಡ ಹಾಗೂ ಶಿಕ್ಷಕರ ಕ್ಷೇತ್ರದ ಸದಸ್ಯರಾದ ವೈ.ಎ. ನಾರಾಯಣ ಸ್ವಾಮಿ, ಎಸ್.ಎಲ್. ಭೋಜೇಗೌಡ ಮತ್ತು ಮರಿತಿಬ್ಬೇಗೌಡ ಅವಧಿ ಮುಕ್ತಾಯವಾಗಲಿದ್ದು, ಇವರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments