Friday, October 18, 2024
Google search engine
Homeತಾಜಾ ಸುದ್ದಿಉದ್ಯೋಗ ವಾರ್ತೆ: 5267 ಪ್ರಾಥಮಿಕ, ಪ್ರೌಢಶಿಕ್ಷಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಉದ್ಯೋಗ ವಾರ್ತೆ: 5267 ಪ್ರಾಥಮಿಕ, ಪ್ರೌಢಶಿಕ್ಷಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ 103ರಲ್ಲಿ “ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು / ಉಪನ್ಯಾಸಕರನ್ನು ನೇಮಕ ಮಾಡುವ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ವಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ವೈಕಿ ಶೇ. 80 ರಷ್ಟು ಅಂದರೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಹುದ್ದೆಗಳ ವಿವರಗಳೊಂದಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸರ್ಕಾರಕ್ಕೆ ವುಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು, ಈ ಕೆಳಕಂಡಂತೆ ಆದೇಶಿಸಿದ್ದಾರೆ.

ವಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ ಘೋಷಿಸಿರುವಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80 ರಷ್ಟು ಅಂದರೆ ಈ ಕೆಳಗೆ ವಿವರಿಸಲಾದಂತ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

 

ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕ ಹುದ್ದೆಗಳ ಭರ್ತಿ ವಿವರ

ಪಿಜಿಟಿ 1 ರಿಂದ 5ನೇ ತರಗತಿ ಶಿಕ್ಷಕರು – 4,424 ಹುದ್ದೆಗಳು

ಜಿಪಿಟಿ 6 ರಿಂದ 8ನೇ ತರಗತಿ ಶಿಕ್ಷಕರು – 78 ಹುದ್ದೆ

ಪಿಇಟಿ ( ಗ್ರೇಡ್-2) ಶಿಕ್ಷಕರು – 380 ಹುದ್ದೆಗಳು

ಎಸ್ ಇಸಿ ಎಎಂ ಶಿಕ್ಷಕರು – 121 ಹುದ್ದೆಗಳು

ಎಸ್‌ಇಸಿ ಪಿಇಟಿ ಶಿಕ್ಷಕರು – 216 ಹುದ್ದೆಗಳು

ಎಸ್‌ಇಸಿ ಎಸ್ ಪಿಎಲ್ ಶಿಕ್ಷಕರು – 48

ಒಟ್ಟು ಹುದ್ದೆಗಳ ಸಂಖ್ಯೆ 5,267

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ಪೂರ್ವ ಪುಕ್ರಿಯೆಗಳು ಮುಕ್ತಾಯಗೊಂಡ ನಂತರ ಮತ್ತು ನೇಮಕಾತಿ ಆದೇಶ ನೀಡುವ ಮೊದಲು ಸದರಿ ಹುದ್ದೆಗಳಿಗೆ ತಗಲಬಹುದಾದ ಆರ್ಥಿಕ ಆಯವ್ಯಯವನ್ನು ಅಂದಾಜಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments