Monday, May 11, 2026
Home ತಾಜಾ ಸುದ್ದಿ ಬಿಜೆಪಿ 220 ಸ್ಥಾನ ಗೆದ್ದರೂ ಸರ್ಕಾರ ರಚಿಸಲು ಸಾಧ್ಯವಿಲ್ಲ: ಅರವಿಂದ್ ಕೇಜ್ರಿವಾಲ್

ಬಿಜೆಪಿ 220 ಸ್ಥಾನ ಗೆದ್ದರೂ ಸರ್ಕಾರ ರಚಿಸಲು ಸಾಧ್ಯವಿಲ್ಲ: ಅರವಿಂದ್ ಕೇಜ್ರಿವಾಲ್

by Vahini
0 comments
aravind kejriwal

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 220 ಸ್ಥಾನ ಗೆದ್ದರೂ ಕೇಂದ್ರದಲ್ಲಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ವರಿಷ್ಠ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯ ಕಚೇರಿಯನ್ನು ಪಕ್ಷದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 220ರಿಂದ 230ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದರು.

ಈ ಬಾರಿ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಆಮ್ ಆದ್ಮಿ ಕೇಂದ್ರದಲ್ಲಿ ಸರ್ಕಾರದ ಭಾಗವಾಗಲಿದೆ ಎಂದು ಅವರು ಹೇಳಿದರು.

ನಾನು ಜೈಲಿನಿಂದ ಹೊರಗೆ ಬಂದ 20 ಗಂಟೆಗಳಲ್ಲಿ ಚುನಾವಣಾ ವಿಶ್ಲೇಷಕರು ಹಾಗೂ ತಜ್ಞರ ಜೊತೆ ಮಾತುಕತೆ ನಡೆಸಿದ್ದೇನೆ. ಅವರ ಪ್ರಕಾರ ಬಿಜೆಪಿ 220 ಸ್ಥಾನ ಕೂಡ ಗೆಲ್ಲುವುದು ಕಷ್ಟ. ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ನುಡಿದರು.

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign