Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

BREAKING ಮೈಸೂರಿನ ಹೋಟೆಲ್ ನಲ್ಲಿ ಸ್ಫೋಟಕ, ನಾಡ ಬಾಂಬ್ ಪತ್ತೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 25 ವೀಕ್ಷಣೆಗಳು
bomb

ವಿಶ್ವಪ್ರಸಿದ್ಧ ದಸರಾ ಹಬ್ಬಕ್ಕೆ ಸಿದ್ಧಗೊಳ್ಳುತ್ತಿರುವ ಸಮಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿ ಹೋಟೆಲ್ ನಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್​ ನಲ್ಲಿ ನೀಲಿ ಬಣ್ಣದ ಪ್ಲಾಸ್ಟಿಕ್ ಚೀಲದಲ್ಲಿ ಅಪರಿಚಿತರು ಸ್ಫೋಟಕಗಳನ್ನು ಇರಿಸಿ ಪರಾರಿಯಾಗಿದ್ದಾರೆ.

ಸ್ಫೋಟಕ ವಸ್ತುಗಳನ್ನು ಗಮನಿಸಿದ ಹೋಟೆಲ್​ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.

ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗಿರಬಹುದು ಎಂದು ಸಂದೇಹಪಡಲಾಗಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದು, ಹೋಟೆಲ್​ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದ್ದಾರೆ.

ಟಿ. ನರಸಿಪುರ ತಾಲೂಕಿನಲ್ಲಿ ಮಾನವ-ಪ್ರಾಣಿ ಸಂಘರ್ಷ ಆಗಾಗ ನಡೆಯುತ್ತಿರುತ್ತದೆ. ಪ್ರಾಣಿಗಳನ್ನು ಬೇಟೆಯಾಡಲು ಅಪರಿಚಿತರು ಸ್ಫೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ.

ಸ್ಫೋಟಕಗಳು ಕಳೆದ ವರ್ಷ ಮೈಸೂರು ದಸರಾ ಮೇಲೆ ಉಗ್ರರ ಕರಿ ನೆರಳು ಬಿದ್ದು ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment