Sunday, October 20, 2024
Google search engine
Homeತಾಜಾ ಸುದ್ದಿಮಹಾರಾಷ್ಟ್ರ ವಿಧಾನಸಭಾ ಚುನಾವಣೆ: 99 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿಯಲ್ಲಿ ಫಡ್ನವೀಸ್ ಗೆ ಸ್ಥಾನ!

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: 99 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿಯಲ್ಲಿ ಫಡ್ನವೀಸ್ ಗೆ ಸ್ಥಾನ!

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ 99 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಪ್ರಮುಖರಿಗೆ ಮಣೆ ಹಾಕಲಾಗಿದೆ.

ಮಹಾರಾಷ್ಟ್ರ ಚುನಾವಣೆ ನವೆಂಬರ್ 20ರಂದು ನಡೆಯಲಿದ್ದು, 23ರಂದು ಫಲಿತಾಂಶ ಪ್ರಕಟವಾಗಲಿದೆ. ಶಿವಸೇನೆ ಮತ್ತು ಎನ್ ಸಿಪಿ ಪಕ್ಷಗಳನ್ನು ಒಡೆದು ಅಧಿಕಾರಕ್ಕೇರಿದ ಬಿಜೆಪಿಗೆ ಇದು ಅತ್ಯಂತ ಮಹತ್ವದ ಚುನಾವಣೆ ಆಗಿದೆ.

288 ವಿಧಾನಸಭಾ ಕ್ಷೇತ್ರಗಳ ಪೈಕಿ 160 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಉಳಿದ ಸ್ಥಾನಗಳನ್ನು ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಬಣ ಮತ್ತು ಏಕಾಂತ್ ಶಿಂಧೆ ಬಣದ ಶಿವಸೇನೆಗೆ ಬಿಟ್ಟುಕೊಟ್ಟಿದೆ.

ಬಿಜೆಪಿ ಭಾನುವಾರ ಬಿಡುಗಡೆ ಮಾಡಿದ 99 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಭಾವಂಕುಲೆ, ಮೂರು ಬಾರಿಯ ಶಾಸಕ ರಾಮ್ ಕದಮ್ ಸೇರಿದಂತೆ ಪ್ರಮುಖರಿಗೆ ಸ್ಥಾನ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments