Monday, September 16, 2024
Google search engine
Homeತಾಜಾ ಸುದ್ದಿಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲು!

ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲು!

ಹೊಟ್ಟೆ ನೋವಿನ ಕಾರಣ ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಅವರನ್ನು ಚನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

86 ವರ್ಷದ ಸುಶೀಲಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಹೊಟ್ಟೆ ನೋವಿನ ನಿಮಿತ್ತ ಆಸ್ಪತ್ರೆಗೆ ಗಾಯಕಿಯನ್ನು ದಾಖಲಿಸಲಾಗಿತ್ತು. ಸೂಕ್ತ ಚಿಕಿತ್ಸೆಯ ಬಳಿಕ ಪಿ.ಸುಶೀಲಾ ಅವರು ಆರೋಗ್ಯ ಸ್ಥಿರವಾಗಿದೆ. ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ.  ಸದ್ಯ ಈ ಸುದ್ದಿ ತಿಳಿದು ಅಭಿಮಾನಿಗಳು ನಿರಾಳವಾಗಿದ್ದಾರೆ.

ಕನ್ನಡ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ಹಾಡಿರುವ ಪಿ.ಸುಶೀಲಾಗೆ ಹಲವು ಪ್ರಶಸ್ತಿಗಳನ್ನು ಒಲಿದು ಬಂದಿವೆ.  ಇದೇನ ಸಭ್ಯತೆ ಇದೇನ ಸಂಸ್ಕೃತಿ, ಹದಿನಾಲ್ಕು ವರ್ಷ ವನವಾಸದಿಂದ ಮರಳಿ ಬಂದಳು ಸೀತೆ, ಫಲಿಸಿತು ಒಲವಿನ ಪೂಜಾ ಫಲ, ಒಲವೇ ಜೀವನ ಸಾಕ್ಷಾತ್ಕಾರ, ನೀ ಬಂದು ನಿಂತಾಗ ಹೀಗೆ ಕನ್ನಡದಲ್ಲೇ 5000ಕ್ಕೂ ಹೆಚ್ಚು ಹಾಡುಗಳನ್ನು ಪಿ.ಸುಶೀಲಾ ಹಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments