Thursday, November 14, 2024
Google search engine
Homeಜಿಲ್ಲಾ ಸುದ್ದಿಚಿಕ್ಕಮಗಳೂರಿನಲ್ಲಿ ನಕ್ಸಲ್ ಚಟುವಟಿಕೆ: ಲತಾ, ಜಯಣ್ಣ ಸೇರಿ ಮೂವರ ವಿರುದ್ಧ ಎಫ್ ಐಆರ್ ದಾಖಲು

ಚಿಕ್ಕಮಗಳೂರಿನಲ್ಲಿ ನಕ್ಸಲ್ ಚಟುವಟಿಕೆ: ಲತಾ, ಜಯಣ್ಣ ಸೇರಿ ಮೂವರ ವಿರುದ್ಧ ಎಫ್ ಐಆರ್ ದಾಖಲು

ನಕ್ಸಲ್ ಚಟುವಟಿಕೆ ಆರಂಭವಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ನಕ್ಸಲ್ ನಾಯಕಿ ಸೇರಿದಂತೆ ಮೂವರ ವಿರುದ್ಧ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ದಶಕದ ಬಳಿಕ ನಕ್ಸಲ್ ಚಟುವಟಿಕೆ ಮಲೆನಾಡು ಭಾಗದಲ್ಲಿ ಆರಂಭವಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಆ್ಯಂಟಿ ನಕ್ಸಲ್ ಫೋರ್ಸ್ ಮತ್ತು ಪೊಲೀಸರು ತಪಾಸಣೆಗೆ ಇಳಿದಾಗ ಮೂರು ಬಂದೂಕುಗಳು ಪತ್ತೆಯಾಗಿವೆ.

jayapura police staion
jayapura police staion

ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬುವರ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾದ ನಕ್ಸಲ್ ನಾಯಕಿ ಮುಂಗಾರು ಲತಾ, ಜಯಣ್ಣ ಸೆರಿದಂತೆ ಮೂವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ಸುಬ್ಬೇಗೌಡ ಅವರ ಮನೆಯಲ್ಲಿ 3 ಬಂದೂಕು ಪತ್ತೆಯಾಗಿವೆ. ಈ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿ ಊಟ ಮಾಡಿ ಹೋಗಿದ್ದಾರೆ ಎಂದು ಹೇಳಲಾಗಿದೆ.

ಕಡೆಗುಂದಿ, ಮುಂಡಗಾರು, ಯಡಗುಂದಿ ವ್ಯಾಪ್ತಿಯ ದಟ್ಟ ಕಾಡಿನ ಭಾಗದಲ್ಲಿ ನಕ್ಸಲರು ಓಡಾಡುತ್ತಿದ್ದಾರೆ ಎಂದು ಶಂಕಿಸಲಾಗಿದೆ.

ಬಂದೂಕು ಸಿಕ್ಕಿರುವ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ಸಿಐಟಿ ಎಡಿಜಿಪಿ ಪ್ರಣಬ್ ಮೊಹಂತಿ ಭೇಟಿ, ಪರಿಶೀಲನೆ ನಡೆಸಿದರು.

ಒತ್ತುವರಿ, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೆ ಇಬ್ಬರನ್ನು ವಶಕ್ಕೆ ಪಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ನಕ್ಸಲ್ ಪೀಡಿತ ಪ್ರದೇಶದಲ್ಲಿ ತೀವ್ರ ಕೂಂಬಿಂಗ್ ಕಾರ್ಯಚರಣೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments