Thursday, September 19, 2024
Google search engine
Homeಅಪರಾಧಪಿಎಸ್ ಐ ಪರಶುರಾಮ್ ಅನುಮಾನಸ್ಪದ ಸಾವು: ಶಾಸಕ ಚೆನ್ನಾರೆಡ್ಡಿ ಪುತ್ರನ ವಿರುದ್ಧ ಎಫ್ ಐಆರ್ ದಾಖಲು

ಪಿಎಸ್ ಐ ಪರಶುರಾಮ್ ಅನುಮಾನಸ್ಪದ ಸಾವು: ಶಾಸಕ ಚೆನ್ನಾರೆಡ್ಡಿ ಪುತ್ರನ ವಿರುದ್ಧ ಎಫ್ ಐಆರ್ ದಾಖಲು

ಬೀಳ್ಕೊಡುಗೆ ಆದ ರಾತ್ರಿಯೇ ಪಿಎಸ್ ಐ ಪರಶುರಾಮ್ ಅನುಮಾನಸ್ಪದ ಸಾವಿನ ಬೆನ್ನಲ್ಲೇ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಅವರ ಪುತ್ರ ಪಂಪಣ್ಣ ಗೌಡ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಯಾದಗಿರಿ ಸೈಬರ್ ಕ್ರೈಮ್ ಠಾಣೆಗೆ ಯಾದಗಿರಿ ನಗರ ಪೊಲೀಸ್ ಠಾಣೆಯಿಂದ ವರ್ಗಾವಣೆ ಆಗಿದ್ದ ಮೂಲತಃ ಕೊಪ್ಪಳ ಮೂಲದವರಾದ ಪಿಎಸ್ಐ ಪರಶುರಾಮ (34) ಹೃದಯಾಘಾತದಿಂದ ಮೃತಪಟ್ಟಿದ್ದರು.

ರಾತ್ರಿ ಬೀಳ್ಕೊಡುಗೆ ನಂತರ ನಗು ನಗುತ್ತಲೇ ಇದ್ದ ಪರಶುರಾಮ್ ಸಿಬ್ಬಂದಿ ಜೊತೆ ರಾತ್ರಿ ಭೋಜನ ಸವಿದು ಮನೆಗೆ ಮರಳಿದ್ದರು. ಮನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಪರಶುರಾಮ್ ಸಾವಿಗೆ ಶಾಸಕರ ಪುತ್ರ 30 ಲಕ್ಷ ರೂ. ಬೇಡಿಕೆ ಇಟ್ಟಿದ್ದರಿಂದ ಒತ್ತಡಕ್ಕೆ ಒಳಗಾಗಿದ್ದರು ಎಂದು ಆರೋಪ ಕೇಳಿ ಬಂದಿತ್ತು.

 ಶಾಸಕರ ಒತ್ತಡದ ಮೇರೆಗೆ ಪರಶುರಾಮ 30 ಲಕ್ಷ ರೂ. ನೀಡಿ ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಮತ್ತೆ ಯಾದಗಿರಿ ಸೈಬರ್​ ಕ್ರೈಮ್​ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಪಿಎಸ್​ಐ ಪರಶುರಾಮ್ ಒತ್ತಡಕ್ಕೆ ಒಳಗಾಗಿದ್ದರು. ಪಿಎಸ್​ಐ ಪರಶುರಾಮ ಸಾಲದ ಸುಳಿಗೆ ಸಿಲುಕಿದ್ದರು. ಪಿಎಸ್​ಐ ಪರಶುರಾಮ್ ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಪೋನ್​ನಲ್ಲಿ ಮಾತನಾಡಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಪಿಎಸ್​ಐ ಪರಶುರಾಮ ಸಾವಿಗೆ ಕಾಂಗ್ರೆಸ್​ ಶಾಸಕ ಚನ್ನಾರೆಡ್ಡಿ ಪಾಟೀಲ್​ ತುನ್ನೂರು ಹಾಗೂ ಪುತ್ರ ಪಂಪಣ್ಣಗೌಡ ಕಾರಣವೆಂದು ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ದೂರು ದಾಖಲಿಸಿದ್ದಾರೆ.

ಕಾಂಗ್ರೆಸ್​ ಶಾಸಕ ಚನ್ನಾರೆಡ್ಡಿ ಪಾಟೀಲ್ ಪದೇ ಪದೇ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ನಾವು ದಲಿತರು, ದುಡ್ಡು ಕೊಡಲಿಲ್ಲ ಎಂಬ ಕಾರಣಕ್ಕೆ ಶಾಸಕರು ಪೋಸ್ಟಿಂಗ್ ಕೊಟ್ಟಿಲ್ಲ. ಶಾಸಕರು ತಪ್ಪು ಮಾಡಿದ್ದಾರೆ ಅವರು ಸ್ಥಳಕ್ಕೆ ಬರಬೇಕು ಎಂದು ಪಿಎಸ್​ಐ ಪರಶುರಾಮ ಪತ್ನಿ ಶ್ವೇತಾ ಒತ್ತಾಯಿಸಿದ್ದಾರೆ. ಶ್ವೇತಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಗೀತಾ ಬಳಿ ದೂರು ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments