Friday, October 18, 2024
Google search engine
Homeತಾಜಾ ಸುದ್ದಿ14 ಅಂತಸ್ತಿನ ವಸತಿ ಸಂಕೀರ್ಣದಲ್ಲಿ ಬೆಂಕಿ: ಮೂವರು ದುರ್ಮರಣ

14 ಅಂತಸ್ತಿನ ವಸತಿ ಸಂಕೀರ್ಣದಲ್ಲಿ ಬೆಂಕಿ: ಮೂವರು ದುರ್ಮರಣ

14 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟ ದಾರುಣ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ಸಂಭವಿಸಿದೆ.

ಅಂಧೇರಿಯ ಲೋಕಂಡ್ವಾಲಾ ಕಾಂಪ್ಲೆಕ್ಸ್ ನ ವಸತಿ ಸಂಕೀರ್ಣದ 10ನೇ ಮಹಡಿಯಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ.

ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (72) ಮತ್ತು ಪೆಲುಬೆಟಾ (42) ಮೃತಪಟ್ಟ ದುರ್ದೈವಿಗಳು.

ದುರ್ಘಟನೆಯಲ್ಲಿ ಗಾಯಗೊಂಡಿದ್ದ ಮೂವರರನ್ನು ಸಮೀಪದ ಕೂಪರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಆಸ್ಪತ್ರೆಗೆ ಬರುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments