Monday, July 1, 2024
Google search engine
Homeಜಿಲ್ಲಾ ಸುದ್ದಿಪ್ರತಿಭಟನೆ ವೇಳೆ ಹೃದಯಾಘಾತದಿಂದ ಬಿಜೆಪಿಯ ಮಾಜಿ ಎಂಎಲ್ ಸಿ ಭಾನುಪ್ರಕಾಶ್ ನಿಧನ

ಪ್ರತಿಭಟನೆ ವೇಳೆ ಹೃದಯಾಘಾತದಿಂದ ಬಿಜೆಪಿಯ ಮಾಜಿ ಎಂಎಲ್ ಸಿ ಭಾನುಪ್ರಕಾಶ್ ನಿಧನ

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ ಹೃದಯಾಘಾತಕ್ಕೆ ಒಳಗಾದ ವಿಧಾನ ಪರಿಷತ್ ಮಾಜಿ ಸದಸ್ಯ ಎಂಬಿ ಭಾನುಪ್ರಕಾಶ್ (M.B Bhanuprakash) ನಿಧನರಾಗಿದ್ದಾರೆ.

ಶಿವಮೊಗ್ಗದಲ್ಲಿ ಸೋಮವಾರ ಗೋಪಿ ಸರ್ಕಲ್‍ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು.

ಪ್ರತಿಭಟನೆ ವೇಳೆ ತೀವ್ರ ಹೃದಯಾಘಾತವಾಗಿ ಭಾನು ಪ್ರಕಾಶ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಮೃತರ ಸ್ವಗ್ರಾಮ ಮತ್ತೂರಿಗೆ ಮೃತದೇಹವನ್ನು ರವಾನೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments