Thursday, September 19, 2024
Google search engine
Homeತಾಜಾ ಸುದ್ದಿಚಿಕ್ಕಬಳ್ಳಾಪುರದಲ್ಲಿ ಬಿಜೆಪಿ-ಜೆಡಿಎಸ್ ಗೆ ಶಾಕ್: ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ?

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ-ಜೆಡಿಎಸ್ ಗೆ ಶಾಕ್: ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ?

ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ದೊಡ್ಡ ಆಘಾತ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಅತ್ಯಂತ ಪ್ರಬಲ ಜೆಡಿಎಸ್ ಮುಖಂಡ ಹಾಗೂ ಪ್ರಾಮಾಣಿಕ ಶಾಸಕ ಎಂದು ಹೆಸರು ಗಳಿಸಿರುವ ಕೆಪಿ ಬಚ್ಚೇಗೌಡ ಜೆಡಿಎಸ್ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸ್ಥಳೀಯ ಸಮಸ್ಯೆಗಳಿಗೆ ಜೆಡಿಎಸ್ ವರಿಷ್ಠರು ಸ್ಪಂದಿಸದ ಕಾರಣ ಜೆಡಿಎಸ್ ತೊರೆಯಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರಿಷ್ಠರು ಕೈಕೊಟ್ಟು ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ ಗೆಲುವಿಗೆ ಪ್ರಯತ್ನಿಸಿದ್ದರು. ಇದರಿಂದ ಬಚ್ಚೇಗೌಡರು ಸೋಲುಂಡಿದ್ದೂ ಅಲ್ಲದೇ ಜೆಡಿಎಸ್ ಮತ್ತು ಒಕ್ಕಲಿಗರ ಪ್ರಾಬಲ್ಯ ಇರುವ ಕ್ಷೇತ್ರದಲ್ಲೇ ಸೋಲುಂಡಿದ್ದರಿಂದ ನೊಂದಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments