Thursday, September 19, 2024
Google search engine
Homeತಾಜಾ ಸುದ್ದಿಶಾಪಿಂಗ್ ವೇಳೆ ಮಾಲ್ ನಲ್ಲಿ ಕುಸಿದು ಬಿದ್ದ ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಪತ್ನಿ!

ಶಾಪಿಂಗ್ ವೇಳೆ ಮಾಲ್ ನಲ್ಲಿ ಕುಸಿದು ಬಿದ್ದ ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಪತ್ನಿ!

ಬೆಂಗಳೂರು: ನಗರದಲ್ಲಿ ಶಾಪಿಂಗ್ ಗೆ ತೆರಳಿದ್ದಂತ ವೇಳೆಯಲ್ಲಿ ಉಸಿರಾಟದ ಸಮಸ್ಯೆಯಿಂದಾಗಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಪತ್ನಿ ಡಾಟಿ ಅವರು ಇಂದು ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿಯಲ್ಲಿರುವಂತ ಐಕಿಯಾ ಮಾಲ್ ಗೆ ಶಾಪಿಂಗ್ ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಉಸಿರಾಟದ ಸಮಸ್ಯೆಯಿಂದ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದಾರೆ.

ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದಂತ ಡಿ.ವಿ ಸದಾನಂದಗೌಡ ಅವರ ಪತ್ನಿ ಡಾಟಿಯನ್ನು ಅವರ ಕಾರು ಚಾಲಕ ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ವಿಷಯ ತಿಳಿದಂತ ಡಿ.ವಿ ಸದಾನಂದಗೌಡ, ದಾಸರಹಳ್ಳಿ ಶಾಸಕ ಮುನಿರಾಜು ಆಸ್ಪತ್ರೆಗೆ ತೆರಳಿ, ಆರೋಗ್ಯವನ್ನು ವಿಚಾರಿಸುತ್ತಿರುವುದಾಗಿ ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments