ಫೋಕ್ಸೊ ಕಾಯ್ದೆಯಡಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಅಲ್ಲದೇ ಅವರ ಬಂಧನಕ್ಕೆ ತಡೆಯಾಜ್ಞೆ ನೀಡಿದ್ದ ಮಧ್ಯಂತರ ಆದೇಶವನ್ನು ಮುಂದುವರಿಸಿದೆ.
ತಮ್ಮ ವಿರುದ್ಧದ ಫೋಕ್ಸೋ ಕಾಯ್ದೆಯಡಿ ದಾಖಲಿಸಿರುವ ಪ್ರಕರಣ ರದ್ದುಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್, ಸರ್ಕಾರದ ಪರ ವಕೀಲರು ಸಮಯ ಕೇಳಿದ್ದರಿಂದ ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿದ್ದಾರೆ.
ಬಿಎಸ್ ಯಡಿಯೂರಪ್ಪ ವಿರುದ್ಧ ವಾದ ಮಂಡಿಸಿದ ಹಿರಿಯ ವಕೀಲ ಸಿವಿ ನಾಗೇಶ್, ಮಂತ್ರಿಗಳು ಪೋಕ್ಸೋ ಪೋಕ್ಸೋ ಎಂದು ಹೇಳುತ್ತಿದ್ದಾರೆ. ಈ ಪ್ರಕರಣ ಫೋಕ್ಸೊ ಕಾಯ್ದೆಯಡಿ ಬರುವುದೇ ಇಲ್ಲ ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲ ಅಶೋಕ್ ನಾಯ್ಕ್, ನಾವು ವಾದ ಮಂಡಿಸಲು ಸಿದ್ಧರಿದ್ದೇವೆ. ಆದರೆ ಸ್ವಲ್ಪ ಸಮಯ ಬೇಕು ಎಂದರು.
ನೀವು ರೆಡಿ ಆದರೆ, ನಾನು ಈಗಲೇ ರೆಡಿ. ಜೈಲಿಗೆ ಕಳುಹಿಸುತ್ತೇವೆ ಎನ್ನುತ್ತಿದ್ದಾರೆ. ಮಧ್ಯಂತರ ಆದೇಶ ತೆರವುಗೊಳಿಸುತ್ತೇವೆ ಎನ್ನುತ್ತಿದ್ದಾರೆ. ಈಗ ನೋಡಿದರೆ ವಿಚಾರಣೆ ಮುಂದೂಡಿಕೆ ಕೇಳುತ್ತಿದ್ದಾರೆ. ಬರಲಿ ವಾದ ಮಂಡಿಸಲಿ, ಹಣೆಯಲ್ಲಿ ಬರೆದಿದ್ದರೆ ಜೈಲಿಗೆ ಹೋಗುತ್ತಾರೆ ಎಂದು ನಾಗೇಶ್ ಪ್ರತಿವಾದಿಸಿದರು. ನಂತರ ಸಿಐಡಿ ಮನವಿ ಮೇರೆಗೆ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿತು.
ಪ್ರತಿನಿತ್ಯ ಒಬ್ಬರಲ್ಲ ಒಬ್ಬ ಸಚಿವರು ಯಡಿಯೂರಪ್ಪ ವಿರುದ್ಧ ಆರೋಪಿಸುತ್ತಿದ್ದಾರೆ. ಬಿಎಸ್ವೈ ಶರಣಾಗಬೇಕು, ಜೈಲಿಗೆ ಕಳುಹಿಸುತ್ತೇವೆ ಎನ್ನುತ್ತಿದ್ದಾರೆ. ಮಧ್ಯಂತರ ಆದೇಶ ತೆರವುಗೊಳಿಸುತ್ತೇವೆ ಎನ್ನುತ್ತಿದ್ದಾರೆ. ಈಗ ನೋಡಿದರೆ ವಿಚಾರಣೆ ಮುಂದೂಡಿಕೆ ಕೇಳುತ್ತಿದ್ದಾರೆ. ಬರಲಿ ವಾದ ಮಂಡಿಸಲಿ, ಹಣೆಯಲ್ಲಿ ಬರೆದಿದ್ದರೆ ಜೈಲಿಗೆ ಹೋಗುತ್ತಾರೆ ಎಂದು ವಕೀಲ ನಾಗೇಶ್ ಸವಾಲು ಹಾಕಿದರು.
ಸಿಐಡಿ ಪರ ವಕೀಲರು, ಬಿಎಸ್ವೈ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ದಾಖಲಿಸಲಾಗಿದೆ. ಆರೋಪಪಟ್ಟಿಯ ಪ್ರತಿ ಸಲ್ಲಿಸಲು ಕಾಲಾವಕಾಶ ಬೇಕಿದೆ ಎಂದು ಸಿಐಡಿ ಪರ ಎಸ್ಪಿಪಿ ಅಶೋಕ್ ನಾಯ್ಕ್ ಮನವಿ ಮಾಡಿದ್ದರಿಂದ ವಿಚಾರಣೆಯನ್ನು ಮುಂದೂಡಲಾಯಿತು.