Home ತಾಜಾ ಸುದ್ದಿ ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ: ಸಿಎಂ ಸಿದ್ದರಾಮಯ್ಯ

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ: ಸಿಎಂ ಸಿದ್ದರಾಮಯ್ಯ

by Editor
0 comments

ಹಾಸನ (ಹೆಬ್ಬಹಳ್ಳಿ): ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆಎಂದು ಸ್ಪಷ್ಟ ಭರವಸೆ ನೀಡಿದರು.

ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಕೆಲವರು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಕರೆ ನೀಡಿದರು.

banner

ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವಿ. ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ ಎಂದು ಗ್ಯಾರಂಟಿ ಮಾತುಗಳನ್ನಾಡಿದರು.

ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಇದೇ ಸಂದರ್ಭದಲ್ಲಿ ಸ್ಪಷ್ಟ ಸೂಚನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ 5 ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ! vote power ಸ್ವಾಮೀಜಿಗೆ ಸಂವಿಧಾನ ಗೊತ್ತಿಲ್ಲ: ಸಚಿವ ಎಂ.ಮಹದೇವಪ್ಪ ಅಸಮಾಧಾನ Muda Scam ಸಿಬಿಐನಿಂದ ಮುಡಾ ಹಗರಣದ ತನಿಖೆ: ಶುಕ್ರವಾರ ಹೈಕೋರ್ಟ್ ತೀರ್ಪು ಪ್ರಕಟ UP Accident ನಿದ್ದೆಗೆ ಜಾರಿ ಚಾಲಕ, ಚಿರನಿದ್ರೆಗೆ ಜಾರಿಗೆ 5 ವೈದ್ಯರು! ಐಪಿಎಲ್‌ ಹರಾಜಿನಲ್ಲಿ ಸೇಲಾದ 13 ಕನ್ನಡಿಗರು: ಮಯಾಂಕ್ ಕಡೆಗಣನೆ! Goutam Gambhir ಮೊದಲ ಟೆಸ್ಟ್ ಗೆದ್ದ ಬೆನ್ನಲ್ಲೇ ಭಾರತಕ್ಕೆ ಮರಳಿದ ಗಂಭೀರ್! Pakistan ಇಮ್ರಾನ್ ಖಾನ್ ಬೆಂಬಲಿಗರಿಂದ ಧಂಗೆ: ಕಂಡಲ್ಲಿ ಗುಂಡಿಕ್ಕಲು ಆದೇಶ